ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಮಸೀದಿ ವಕ್ಫ್ ಕಾಯ್ದೆಗೆ ವಿರುದ್ಧವಾಗಿದೆ: ಜಫರ್ಯಾಬ್ ಜಿಲಾನಿ

Prasthutha|

ಅಯೋಧ್ಯೆಯ ಬಾಬರಿ ಮಸೀದಿಗೆ ಬದಲಿಯಾಗಿ ನಿರ್ಮಾಣಗೊಳ್ಳಲಿರುವ ಮಸೀದಿ ವಕ್ಫ್ ಕಾಯ್ದೆಗೆ ವಿರುದ್ಧವಾಗಿದ್ದು, ಶರೀಯತ್ ಕಾನೂನಿನ ಪ್ರಕಾರ ನಿಯಮಬಾಹಿರವಾಗಿದೆ. ಇದು ಕಾಯ್ದೆಯನ್ನು ಉಲ್ಲಂಘಿಸುತ್ತಿದೆ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ(ಎಐಎಂಪಿಎಲ್‌ ಬಿ) ಸದಸ್ಯ ಜಫರ್ಯಾಬ್ ಜಿಲಾನಿ ಹೇಳಿದ್ದಾರೆ.

- Advertisement -

ಸುಪ್ರೀಂ ಕೋರ್ಟ್ ತೀರ್ಪು ಬಳಿಕ ಅಯೋಧ್ಯೆಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಮಸೀದಿಯು ಕಾಯ್ದೆಯನ್ನು ಉಲ್ಲಂಘಿಸುತ್ತಿದ್ದು, ವಕ್ಫ್ ಕಾಯ್ದೆಯು ಶರೀಯತ್ ಅನ್ನು ಆಧರಿಸಿರುವುದರಿಂದ ಅದನ್ನೂ ಉಲ್ಲಂಘಿಸುತ್ತಿದೆ ಎಂದು ಬಾಬರಿ ಮಸೀದಿ ಕ್ರಿಯಾ ಸಮಿತಿ ಸಂಚಾಲಕರೂ ಆಗಿರುವ ಅವರು ತಿಳಿಸಿದ್ದಾರೆ.

ವಕ್ಫ್ ಕಾಯ್ದೆಯ ಪ್ರಕಾರ ಮಸೀದಿ ಅಥವಾ ಮಸೀದಿಯ ಜಾಗವನ್ನು ವಿನಿಮಯ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಜಿಲಾನಿ ಹೇಳಿದರು.

- Advertisement -

“ಪ್ರತಿಯೊಬ್ಬರೂ ತಮ್ಮದೇ ಆದ ರೀತಿಯಲ್ಲಿ ಶರೀಯತ್ ಅನ್ನು ವ್ಯಾಖ್ಯಾನಿಸುತ್ತಾರೆ. ಸುಪ್ರೀಂ ಕೋರ್ಟ್ ನ ನಿರ್ದೇಶನದ ಮೇರೆಗೆ ಭೂಮಿ ಮಂಜೂರು ಮಾಡಿರುವುದರಿಂದ ಇದು ಕಾನೂನುಬಾಹಿರವಾಗದು’ ಎಂದು ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಕಾರ್ಯದರ್ಶಿ ಅಕ್ತರ್ ಹುಸೇನ್ ತಿಳಿಸಿದ್ದಾರೆ.

“ಸರ್ಕಾರದ ಒತ್ತಡದಲ್ಲಿ ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿ ಕಾರ್ಯನಿರ್ವಹಿಸುತ್ತಿದೆ” ಎಂದು ಎಐಎಂಪಿಎಲ್‌ ಬಿ ಯ ಕಾರ್ಯಕಾರಿ ಸಮಿತಿ ಸದಸ್ಯ ಇಲ್ಯಾಸ್ ಆಪಾದಿಸಿದ್ದಾರೆ.

Join Whatsapp