ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ನೀಡಿರುವ ಜಮೀನು ಕೂಡ ವಿವಾದಾತ್ಮಕ : ಸಹೋದರಿಯರಿಂದ ಹೈಕೋರ್ಟ್ ಗೆ ಅರ್ಜಿ

Prasthutha|

- Advertisement -

ಅಯೋಧ್ಯೆಯಲ್ಲಿ ಮಸೀದಿ ನಿರ್ಮಿಸಲು ಸುನ್ನಿ ವಕ್ಫ್ ಮಂಡಳಿಗೆ ನೀಡಿದ್ದ ಐದು ಎಕರೆ ಭೂಮಿಯನ್ನು ಪ್ರಶ್ನಿಸಿ ಸಹೋದರಿಯರು ಲಕ್ನೋ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ದೆಹಲಿ ಮೂಲದ ರಾಣಿ ಬಲೂಜಾ ಮತ್ತು ರಾಮ ರಾಣಿ ಪಂಜಾಬಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠ ಫೆ. 8ರಂದು ಪರಿಗಣಿಸಲಿದೆ. ತಮ್ಮ ತಂದೆ ಜ್ಞಾನ ಚಂದ್ರ ಪಂಜಾಬಿ ಹೆಸರಿನಲ್ಲಿರುವ 28 ಎಕರೆಗಳಲ್ಲಿ ಐದು ಎಕರೆ ಸ್ಥಳವನ್ನು ಉತ್ತರ ಪ್ರದೇಶ ಸರ್ಕಾರವು ಮಸೀದಿ ನಿರ್ಮಿಸಲು ವಕ್ಫ್ ಮಂಡಳಿಗೆ ಹಸ್ತಾಂತರಿಸಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ವಿಭಜನೆಯ ಸಮಯದಲ್ಲಿ ಪಂಜಾಬ್‌ನಿಂದ ಬಂದಿದ್ದ ತಮ್ಮ ತಂದೆ ಫೈಝಾಬಾದ್‌ನಲ್ಲಿ ವಾಸಿಸುತ್ತಿದ್ದರು. ಆ ಅವಧಿಯ ನಂತರವೂ ಭೂಮಿಯು ಅವರ ಹೆಸರಿನಲ್ಲೇ ಉಳಿದಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಬಾಬರಿ ಮಸೀದಿ ಭೂ ವಿವಾದದಲ್ಲಿ ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಮಸೀದಿ ನಿರ್ಮಿಸಲು ಸುನ್ನಿ ವಕ್ಫ್ ಮಂಡಳಿಗೆ ಐದು ಎಕರೆ ಜಮೀನು ನೀಡಲಾಗಿತ್ತು.



Join Whatsapp