Home ಕರಾವಳಿ ಅರೆವೈದ್ಯಕೀಯ ವಿಭಾಗಕ್ಕೆ ಸರ್ಕಾರದ ಅಧೀನದಲ್ಲಿ ಮಂಡಳಿ ಸ್ಥಾಪಿಸಲು ಕ್ಯಾಂಪಸ್ ಫ್ರಂಟ್ ವತಿಯಿಂದ ತಹಶೀಲ್ದಾರ್ ಗಳಿಗೆ ಮನವಿ

ಅರೆವೈದ್ಯಕೀಯ ವಿಭಾಗಕ್ಕೆ ಸರ್ಕಾರದ ಅಧೀನದಲ್ಲಿ ಮಂಡಳಿ ಸ್ಥಾಪಿಸಲು ಕ್ಯಾಂಪಸ್ ಫ್ರಂಟ್ ವತಿಯಿಂದ ತಹಶೀಲ್ದಾರ್ ಗಳಿಗೆ ಮನವಿ

ಮಂಗಳೂರು : ವೈದ್ಯಕೀಯ ಶಿಕ್ಷಣದ ಅವಿಭಾಜ್ಯ ಅಂಗವಾಗಿರುವ ಅರೆವೈದ್ಯಕೀಯ ಕೋರ್ಸ್ ಗೆ ಪ್ರತ್ಯೇಕವಾಗಿ ಸರಕಾರದ ಮಂಡಳಿ ಇಲ್ಲದ ಕಾರಣ ಅರೆವೈದ್ಯಕೀಯ ಪದವೀಧರರು ಮತ್ತು ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸ ಮುಗಿದ ನಂತರ ಉದ್ಯೋಗಕ್ಕಾಗಿ ಪರದಾಡುತ್ತಿದ್ದಾರೆ. ತಕ್ಷಣ ರಾಜ್ಯ ಸರಕಾರವು ವಿದ್ಯಾರ್ಥಿಗಳಿಗೆ, ಪದವೀಧರರಿಗೆ ಆಗುತ್ತಿರುವ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಇದಕ್ಕೆ ಪರಿಹಾರ ರೂಪಿಸುವ ನಿಟ್ಟಿನಲ್ಲಿ ಸರಕಾರದ ಅಧೀನದಲ್ಲಿ ಅರೆವೈದ್ಯಕೀಯ ಮಂಡಳಿ ಸ್ಥಾಪಿಸಬೇಕೆಂದು ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲಾ ಸಮಿತಿ ವತಿಯಿಂದ ಮಂಗಳೂರು ಹಾಗೂ ಮೂಡಬಿದ್ರೆ ತಹಶೀಲ್ದಾರ್ ಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಮಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಶರ್ಫುಧ್ಧೀನ್ ಬಜ್ಪೆ , ಕಾರ್ಯದರ್ಶಿ ಅಶ್ರಫ್ ಪೊರ್ಕೊಡಿ ,ಜಿಲ್ಲಾ ಸಮಿತಿ ಸದಸ್ಯ ನಬೀಲ್ ಮೂಡಬಿದ್ರೆ ಏರಿಯಾಧ್ಯಕ್ಷರಾದ ರಾಯಿಫ್ ಮತ್ತು ಅಫ್ರಾಝ್ ಉಪಸ್ತಿತರಿದ್ದರು.

Join Whatsapp
Exit mobile version