ಮುಂಬೈ: ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ವಿರುದ್ಧ ಇನ್ನೊಂದು ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಬಾರ್ ಆಂಡ್ ಬೆಂಚ್ ಟ್ವೀಟ್ ಮಾಡಿದೆ.
ಮಹಿಳಾ ಪೊಲೀಸರೊಂದಿಗೆ ದುರ್ವರ್ತನೆ ತೋರಿದ್ದಕ್ಕಾಗಿ ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯಡಿ ಪ್ರಕರಣವನ್ನು ದಾಖಲಿಸಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೆ ಬರಬೇಕಾಗಿದೆ.
ಸಾರ್ವಜನಿಕ ಆಸ್ತಿ ಹಾನಿ ಕಾಯ್ದೆಯಡಿಯೂ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.