Home ಟಾಪ್ ಸುದ್ದಿಗಳು ಆಕಸ್ಮಿಕವಾಗಿ ಗುಂಡು ತಗುಲಿ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು

ಆಕಸ್ಮಿಕವಾಗಿ ಗುಂಡು ತಗುಲಿ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು

ಚಂಡೀಗಢ: ಪಂಜಾಬ್‌ನ ಲುಧಿಯಾನ ಕ್ಷೇತ್ರದ ಆಪ್ ಶಾಸಕ ಗುರುಪ್ರೀತ್ ಗೋಗಿ ಆಕಸ್ಮಿಕವಾಗಿ ಗುಂಡು ತಗುಲಿ ಶುಕ್ರವಾರ ತಡರಾತ್ರಿ ಸಾವನ್ನಪ್ಪಿದ್ದಾರೆ.

ಗುರುಪ್ರೀತ್ ಗೋಗಿ (58) ಅವರ ತಲೆಗೆ ಗುಂಡು ತಗುಲಿದ ನಂತರ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಷ್ಟು ಹೊತ್ತಿಗಾಗಲೇ ಶಾಸಕರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಜಸ್ಕರ್ ಸಿಂಗ್ ತೇಜ ತಿಳಿಸಿದ್ದಾರೆ.

ಗೋಗಿ ಅವರ ಮೃತದೇಹವನ್ನು ಡಿಎಂಸಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ತಲೆಗೆ ಆಕಸ್ಮಿಕವಾಗಿ ಗುಂಡು ತಗುಲಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಹೇಳಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಅಸಲಿ ಸತ್ಯ ಗೊತ್ತಾಗಲಿದೆ ಎಂದು ತೇಜ ಹೇಳಿದ್ದಾರೆ.

Join Whatsapp
Exit mobile version