ಲಕ್ಷದ್ವೀಪದ ಆಡಳಿತಾಧಿಕಾರಿ ಪ್ರಫುಲ್ ಪಟೇಲ್ ಅವರನ್ನು ‘ಜೈವಿಕ ಆಯುಧ’ವಾಗಿ ನಿಯೋಜಿಸಲಾಗಿದೆ ಎಂದು ಹೇಳಿಕೆ ನೀಡಿದ್ದ ಕಾರಣಕ್ಕೆ ದೇಶದ್ರೋಹದ ಆರೋಪ ಎದುರಿಸುತ್ತಿದ್ದ ನಟಿ ಆಯಿಶಾ ಸುಲ್ತಾನ ಅವರಿಗೆ ಕೇರಳ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಐಪಿಸಿಯ ಸೆಕ್ಷನ್ 124 ಎ ಮತ್ತು 153 ಬಿ ಅಡಿಯಲ್ಲಿ ತನ್ನ ವಿರುದ್ಧ ಎಫ್ ಐಆರ್ ದಾಖಲಾದ ನಂತರ ಲಕ್ಷದ್ವೀಪ ಮೂಲದ ನಟಿ ಆಯಿಶಾ ಸುಲ್ತಾನಾ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ನಟಿ ಜೂನ್ 20 ರಂದು ಕವರಟ್ಟಿ ಪೊಲೀಸ್ ಠಾಣೆಗೆ ಹಾಜರಾಗಿ ವಿಚಾರಣೆ ಎದುರಿಸಿದ್ದರು.
ಆಯಿಶಾ ಸುಲ್ತಾನಗೆ ನಿರೀಕ್ಷಣಾ ಜಾಮೀನು ನೀಡಿದ ಕೇರಳ ಹೈಕೋರ್ಟ್
Prasthutha|