Home ಟಾಪ್ ಸುದ್ದಿಗಳು ಇಂಧನ ಬೆಲೆ ಇಳಿಕೆಗೆ ಒತ್ತಾಯಿಸಿ ಪ್ರತಿಭಟನೆ: ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲು

ಇಂಧನ ಬೆಲೆ ಇಳಿಕೆಗೆ ಒತ್ತಾಯಿಸಿ ಪ್ರತಿಭಟನೆ: ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲು

ಚೆನ್ನೈ : ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ತೆರಿಗೆ ಕಡಿಮೆಗೊಳಿಸುವಂತೆ ಒತ್ತಾಯಿಸಿ ಚೆನ್ನೈನಲ್ಲಿರುವ ರಾಜ್ಯ ಸಚಿವಾಲಯಕ್ಕೆ ಪ್ರತಿಭಟನಾ ಜಾಥಾ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಮತ್ತು 5,000 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ವಿರುದ್ಧ ತಮಿಳುನಾಡು ಪೊಲೀಸರು ಬುಧವಾರ ಪ್ರಕರಣ ದಾಖಲಿಸಿದ್ದಾರೆ.

ಅಣ್ಣಾಮಲೈ ಅವರೊಂದಿಗೆ 5,000 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಮಂಗಳವಾರ ರಾಜ್ಯ ಸಚಿವಾಲಯದತ್ತ ಪಾದಯಾತ್ರೆ ನಡೆಸಿದ್ದರು.

ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅಣ್ಣಾಮಲೈ, ರಾಜ್ಯ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡುವ ಭರವಸೆ ನೀಡಿತ್ತು. ರಾಜ್ಯ ಸರ್ಕಾರ ಈ ಭರವಸೆಯನ್ನು ಈಡೇರಿಸಬೇಕು ಎಂದು ಆಗ್ರಹಿಸಿದ್ದರು.

Join Whatsapp
Exit mobile version