Home ರಾಜ್ಯ ಉಜಿರೆಯಲ್ಲಿ ಹಲ್ಲೆ ನಡೆಸಿದ ಭಜರಂಗ ದಳದ ಕಾರ್ಯಕರ್ತರ ಬಂಧನ

ಉಜಿರೆಯಲ್ಲಿ ಹಲ್ಲೆ ನಡೆಸಿದ ಭಜರಂಗ ದಳದ ಕಾರ್ಯಕರ್ತರ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ಹೋಟೆಲ್ ನೌಕರನಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ಭಜರಂಗ ದಳದ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಅಜಿತ್ ಕುಮಾರ್, ಅರುಣ್ ಕುಮಾರ್ , ನಿತೀಶ್, ಆಶಿಶ್ ಕುಮಾರ್, ಪರಮೇಶ್ವರ್ ಹಾಗೂ ನವೀನ ಬಂಧಿತ ಆರೋಪಿಗಳು. ಇವರೆಲ್ಲರೂ ಭಜರಂಗ ದಳದ ಕಾರ್ಯಕರ್ತರು ಎನ್ನಲಾಗಿದೆ.
ಆರೋಪಿಗಳು ಜನವರಿ 23ರಂದು ಉಜಿರೆಯ ಹೋಟೆಲ್ ಒಂದರ ನೌಕರ ಮುಹಮ್ಮದ್ ಅಲ್ತಾಫ್ (21) ಎಂಬವರ ಮೇಲೆ ಕ್ಷುಲ್ಲಕ ಕಾರಣ ಮುಂದಿಟ್ಟು ಹಲ್ಲೆ ನಡೆಸಿದ್ದರು. ಹಲ್ಲೆ ತಡೆಯಲು ಬಂದಿದ್ದ ಅಲ್ತಾಫ್ ಸಹೋದರ ಮುಹಮ್ಮದ್ ಅಶ್ರಫ್ ಎಂಬವರ ಮೇಲೂ ಈ ಗುಂಪು ಹಲ್ಲೆ ನಡೆಸಿದ್ದರು.
ಈ ಬಗ್ಗೆ ಅಲ್ತಾಫ್ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದರು. ಇಂದು ಪೊಲೀಸರು ಕಾರ್ಯಾಚರಣೆ ನಡೆಸಿ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಗುಂಪಿನಲ್ಲಿದ್ದ ಇತರ ಕೆಲವರು ತಲೆಮರೆಸಿಕೊಂಡಿದ್ದಾರೆ.
ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಜಿಲ್ಲಾ ಎಸ್ ಡಿಪಿಐ ಮುಖಂಡರು ಪೊಲೀಸ್ ಇಲಾಖೆಯ ಮೇಲೆ ಒತ್ತಡ ಹೇರಿದ್ದರು.
ಎಸ್ ಡಿಪಿಐ ಜಿಲ್ಲಾ ಮುಖಂಡ ಅತಾವುಲ್ಲಾ ಜೋಕಟ್ಟೆ ಟ್ವಿಟ್ ಮಾಡಿ, ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಮುಸ್ಲಿಂ ಯುವಕನ ಮೇಲೆ ಭಜರಂಗಿ ಅಟ್ಟಹಾಸ ಮಾರ್ಧನಿಸಿದೆ. ಪಾಕ್ ಪರ ಘೋಷಣೆ ಕೂಗಿದವರ ವಿರುದ್ಧ ಪೊಲೀಸರು ಕ್ರಮಕೈಗೊಳ್ಳದ ಪರಿಣಾಮ ಈ ಘಟನೆ ಸಂಭವಿಸಿದೆ. ದುಷ್ಕರ್ಮಿಗಳನ್ನು ತಕ್ಷಣ ಬಂಧನವಾಗದಿದ್ದರೆ ಹೋರಾಟ ತೀವ್ರತೆಗೆ ಪೊಲೀಸರ ನಿಷ್ಕ್ರಿಯತೆಯೇ ಕಾರಣವಾದೀತು ಎಂದು ಎಚ್ಚರಿಸಿದ್ದರು.
ಇದರಿಂದ ಎಚ್ಚೆತ್ತುಕೊಂಡ ಬೆಳ್ತಂಗಡಿ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

Join Whatsapp
Exit mobile version