ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ ನೈಜ ಆರೋಪಿಗಳನ್ನು ಬಂಧಿಸುವಂತೆ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನಿಯೋಗ ಇಂದು ಮಂಗಳೂರಿನಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಅಬ್ದುಲ್ ಅಝೀಮ್ ಅವರಿಗೆ ಮನವಿ ಸಲ್ಲಿಸಿತು.
ಪಾಕ್ ಪರ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಬೇಕು, ಅಮಾಯಕರಾದ ಮೂವರು ಮುಸ್ಲಿಂ ಯುವಕರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಮತ್ತು ಸುಳ್ಳು ಮೊಕದ್ದಮೆ ದಾಖಲಿಸಿ ಅಮಾಯಕ ಯುವಕರನ್ನು ಜೈಲಿಗಟ್ಟಿದ ಬೆಳ್ತಂಗಡಿ ಪೊಲೀಸ್ ಉಪ ನಿರೀಕ್ಷಕರಾದ ನಂದಕುಮಾರ್ ಅವರನ್ನು ಕೂಡಲೇ ಸೇವೆಯಿಂದ ಅಮಾನತು ಗೊಳಿಸಬೇಕು ಮುಂತಾದ ಬೇಡಿಕೆಗಳನ್ನು ಈಡೇರಿಸುವಂತೆ ನಿಯೋಗವು ಅಝೀಮ್ ಅವರಿಗೆ ಮನವಿ ಸಲ್ಲಿಸಿತು.
ನಿಯೋಗದಲ್ಲಿ ಎಸ್.ಡಿ.ಪಿ.ಐ ಜಿಲ್ಲಾದ್ಯಕ್ಷ ಅಥಾವುಲ್ಲಾ ಜೋಕಟ್ಟೆ, ಎಸ್‌ಡಿಪಿಐ ರಾಜ್ಯ ಸಮಿತಿ ಸಮಿತಿ ಸದಸ್ಯ ಜಲೀಲ್ ಕೃಷ್ಣಾಪುರ, ಜಿಲ್ಲಾ ಕಾರ್ಯದರ್ಶಿ ಜಮಾಲ್ ಜೋಕಟ್ಟೆ, ಬೆಳ್ತಂಗಡಿ ಕ್ಷೇತ್ರ ಅದ್ಯಕ್ಷರಾದ ಹೈದರ್ ನಿರ್ಸಾಲ್, ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಉಪಸ್ಥಿತರಿದ್ದರು.
ಉಜಿರೆ ಘಟನೆ; ರಾಜ್ಯ ಅಲ್ಪಸಂಖ್ಯಾತ ಆಯೋಗದೊಂದಿಗೆ ಎಸ್.ಡಿ.ಪಿ.ಐ ಚರ್ಚೆ
Prasthutha|