ಹಿಜಾಬ್ ನಿಷೇಧದಿಂದ ವಿದ್ಯಾರ್ಥಿಗಳ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ : ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಿಂದ ನೋಟೀಸ್

Prasthutha|

►ಉಡುಪಿ ಜಿಲ್ಲಾ ಮ್ಯಾಜಿಸ್ಟ್ರೇಟ್’ಗೆ ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ತಾಕೀತು

- Advertisement -

ಉಡುಪಿ : ಹಿಜಾಬ್ ಧರಿಸಿದ್ದಕ್ಕಾಗಿ ಎಂಟು ಮಂದಿ ವಿದ್ಯಾರ್ಥಿನಿಯರನ್ನು ಉಡುಪಿಯ ಸರ್ಕಾರಿ ಕಾಲೇಜಿಗೆ ಪ್ರವೇಶಿಸದಂತೆ ನಿಷೇಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ ಎಚ್ ಆರ್ ಸಿ) ಇಂದು ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

“ಪ್ರಕರಣದಲ್ಲಿನ ವಿಚಾರಗಳು ಕಳವಳಕಾರಿಯಾಗಿವೆ. ದೂರಿನಲ್ಲಿ ಆರೋಪಿಸಲಾದ ವಿಚಾರಗಳು  ‘ಶಿಕ್ಷಣದ ಹಕ್ಕು’ ಒಳಗೊಂಡಂತಹಾ ಗಂಭೀರ ಸ್ವರೂಪದ್ದಾಗಿವೆ. ಆದ್ದರಿಂದ ಈ ಪ್ರಕರಣದಲ್ಲಿ ಸಂತ್ರಸ್ತ ವಿದ್ಯಾರ್ಥಿಗಳ ಮಾನವ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ” ಎಂದು ನೋಟಿಸ್ ನಲ್ಲಿ ಹೇಳಲಾಗಿದೆ.

- Advertisement -

ಈ ನೋಟೀಸ್ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಉಡುಪಿಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಗೆ ಕಳುಹಿಸಲಾಗಿದ್ದು, ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಆದೇಶಿಸಲಾಗಿದೆ.

Join Whatsapp