Home ಟಾಪ್ ಸುದ್ದಿಗಳು ಉಡುಪಿ | ಹೆಬ್ರಿಯಲ್ಲಿ ಮೇಘಸ್ಫೋಟ: ಭೀಕರ ಪ್ರವಾಹ ಸೃಷ್ಟಿ

ಉಡುಪಿ | ಹೆಬ್ರಿಯಲ್ಲಿ ಮೇಘಸ್ಫೋಟ: ಭೀಕರ ಪ್ರವಾಹ ಸೃಷ್ಟಿ

ಉಡುಪಿ: ಪಶ್ಚಿಮ ಘಟ್ಟದ ತಪ್ಪಲು ಹೆಬ್ರಿಯಲ್ಲಿ ಮಧ್ಯಾಹ್ನ 4.30 ರ ಸುಮಾರಿಗೆ ಮೇಘಸ್ಫೋಟವಾಗಿದ್ದು, ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ ಹಠಾತ್ ಜಲ ಪ್ರವಾಹ ಉಂಟಾಗಿದೆ.

ಪರಿಣಾಮ ಬಲ್ಲಾಡಿಯ ಈಶ್ವರನಗರ ಸಮೀಪದ ಬಮ್ಮಗುಂಡಿ ಹೊಳೆ ಉಕ್ಕಿ ಹರಿದು ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಭಾರೀ ಆವಾಂತರ ಸೃಷ್ಟಿಯಾಗಿದೆ.

ಜೊತೆಗೆ ಭಾರೀ ನೆರೆಯಿಂದ ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಎರಡು ಕಾರು ಹಾಗೂ ಎರಡು ಬೈಕ್‌’ಗಳು ಕೊಚ್ಚಿಹೋಗಿವೆ.

ಕಬ್ಬಿನಾಲೆ ಭಾಗದ ಪರ್ವತ ಸಾಲಿನಲ್ಲಿ ಮೇಘ ಸ್ಫೋಟವಾಗಿ ಈ ಭೀಕರ ಪ್ರವಾಹ ಸೃಷ್ಟಿಯಾಗಿದ್ದು, ಸ್ಥಳಿಯರಿಂದ ರಕ್ಷಣೆ ಕಾರ್ಯಾಚರಣೆ ಮುಂದುವರೆದಿದೆ.

Join Whatsapp
Exit mobile version