ಉತ್ತರಪ್ರದೇಶ: ಅಯೋಧ್ಯೆಯ ಶಾಲೆಯೊಂದರಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟವಾಗಿ ಅನ್ನ ಹಾಗೂ ಉಪ್ಪನ್ನು ನೀಡಿದ್ದು ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.
ಬಿಕಾಪುರ ಬ್ಲಾಕ್‌ನಲ್ಲಿರುವ ಬೈಂತಿ ಚೌರೆ ಬಜಾರ್‌ನ ಪಾಂಡೆ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಮಂಗಳವಾರ ಮಧ್ಯಾಹ್ನದ ಊಟದ ವೇಳೆ ಸಾದಾ ಅನ್ನ ಮತ್ತು ಉಪ್ಪು ನೀಡಲಾಗಿದೆ ಗ್ರಾಮಸ್ಥರು ದೂರು ನೀಡಿದ್ದಾರೆ. ಇಂತಹ ಕೃತ್ಯ ಇದೇ ಮೊದಲಲ್ಲ ಎಂದು ಆರೋಪಿಸಿದ್ದಾರೆ.
ಪ್ರಾಥಮಿಕ ಶಿಕ್ಷಣಾಧಿಕಾರಿ (ಬಿಎಸ್‌ಎ) ಸಂತೋಷ್‌ಕುಮಾರ್ ರೈ ಮಾತನಾಡಿ, ವಿಷಯ ಗಮನಕ್ಕೆ ಬಂದ ತಕ್ಷಣ ಬ್ಲಾಕ್ ಶಿಕ್ಷಣಾಧಿಕಾರಿಯಿಂದ ವರದಿ ತರಿಸಿಕೊಳ್ಳಲಾಗಿದೆ, ತಪ್ಪಿತಸ್ಥರು ಹಾಗೂ ಕಾರಣರಾದ ಶಿಕ್ಷಕರ ವಿರುದ್ಧ ಇಲಾಖೆ ಕ್ರಮ ಜರುಗಿಸುತ್ತದೆ ಎಂದು ಹೇಳಿದರು.
ವಿಡಿಯೋ ನೋಡಿದ ಅಯೋಧ್ಯೆಯ ಶಿಕ್ಷಣಾಧಿಕಾರಿ ಶಾಲೆಯ ಪ್ರಾಂಶುಪಾಲರನ್ನು ಸಹಿತ ಶಾಲೆಯ ಮುಖ್ಯಸ್ಥರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.