ಉತ್ತರ ಪ್ರದೇಶದಲ್ಲಿ ಕೋಟಿ ವೆಚ್ಚದ ರಸ್ತೆ ಉದ್ಘಾಟನೆ ವೇಳೆ ತೆಂಗಿನಕಾಯಿ ಬದಲು ರಸ್ತೆಯೇ ಬಿರುಕು!

Prasthutha|

ಲಖ್ನೋ: ಉದ್ಘಾಟನೆ ವೇಳೆ ತೆಂಗಿನಕಾಯಿ ಒಡೆದಾಗ ₹1.16 ಕೋಟಿ ವೆಚ್ಚದಲ್ಲಿ ನಿರ್ಮಿಸಿದ 7 ಕಿ.ಮೀ. ರಸ್ತೆಯೊಂದು ಬಿರುಕು ಬಿಟ್ಟ ಘಟನೆ ಉತ್ತರ ಪ್ರದೇಶದ ಬಿಜನೋರ್‌ ಸದಾರ್‌ನಲ್ಲಿ ನಡೆದಿದೆ.

- Advertisement -

ಉದ್ಘಾಟನೆಗೆ ಬಂದಿದ್ದ ಬಿಜನೋರ್‌ ಸದಾರ್‌ ಕ್ಷೇತ್ರದ ಬಿಜೆಪಿ ಶಾಸಕಿ ಸುಚಿ ಮೌಸಮ್‌ ಚೌಧರಿ ಅವರು ಒಡೆದ ತೆಂಗಿನಕಾಯಿ ಹೋಳಾಗದೆ ರಸ್ತೆಯೇ ಬಿರುಕು ಬಿಟ್ಟಿದೆ. ನಂತರ ಅಧಿಕಾರಿಗಳ ಮೇಲೆ ಹರಿಹಾಯ್ದ ಶಾಸಕಿ ಕಳಪೆ ಕಾಮಗಾರಿ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.

ತಜ್ಞರ ತಂಡ ಆಗಮಿಸಿ, ರಸ್ತೆಯ ಮಾದರಿಯನ್ನು ತೆಗೆದುಕೊಂಡು ಹೋಗುವ ವರೆಗೆ ಸುಮಾರು 3 ಗಂಟೆಗಳ ಕಾಲ ಶಾಸಕಿ ಸುಚಿ ಅವರು ಸ್ಥಳದಲ್ಲೇ ಧರಣಿ ಕುಳಿತಿದ್ದರು.

- Advertisement -

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕಿ, “ನೀರಾವರಿ ವಿಭಾಗದಿಂದ ₹1.16 ಕೋಟಿ ವೆಚ್ಚದಲ್ಲಿ ರಸ್ತೆಯನ್ನು ನಿರ್ಮಿಸಲಾಗಿದೆ. 7 ಕಿ.ಮೀ ಉದ್ದದ ರಸ್ತೆಯನ್ನು ಉದ್ಘಾಟಿಸಲು ನನ್ನನ್ನು ಆಹ್ವಾನಿಸಿದ್ದರು. ಉದ್ಘಾಟನೆ ವೇಳೆ ತೆಂಗಿನಕಾಯಿ ಒಡೆದಾಗ ಅದು ಹೋಳಾಗುವ ಬದಲು ರಸ್ತೆಗೇ ಹಾನಿಯಾಗಿದ್ದು ಕಂಡುಬಂತು. ರಸ್ತೆಯ ಮೇಲ್ಭಾಗ ಕಿತ್ತುಬಂತು. ಕಳಪೆ ಕಾಮಗಾರಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಶಾಸಕಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

Join Whatsapp