ಉತ್ತರ ಪ್ರದೇಶ| ‘ಲವ್ ಜಿಹಾದ್’ ವಿರುದ್ಧ ಹೊಸ ಕಾನೂನಿನಡಿಯಲ್ಲಿ ಮೊದಲ ಪ್ರಕರಣ ದಾಖಲು

Prasthutha|

ಲಕ್ನೋ: ಮುಸ್ಲಿಂ ಪುರುಷನೊಬ್ಬ ತನ್ನ ಧರ್ಮವನ್ನು ಬದಲಾಯಿಸುವಂತೆ ಹಿಂದೂ ಮಹಿಳೆಯ ಮೇಲೆ ಒತ್ತಡ ಹೇರುತ್ತಿದ್ದಾನೆ ಎಂದು ಆರೋಪಿಸಿ ಉತ್ತರ ಪ್ರದೇಶ ಪೊಲೀಸರು ರಾಜ್ಯದ ಹೊಸ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಮೊದಲ ಪ್ರಕರಣ ದಾಖಲಿಸಿದ್ದಾರೆ.

- Advertisement -

ಪ್ರಕರಣವನ್ನು ಉತ್ತರಪ್ರದೇಶದ ಕಾನೂನುಬಾಹಿರ ಧಾರ್ಮಿಕ ಮತಾಂತರ ನಿಷೇಧ 2020ರ ಹೊಸ ಸುಗ್ರೀವಾಜ್ಞೆಯ ಸೆಕ್ಷನ್ 3 ಮತ್ತು 5ರ ಅಡಿಯಲ್ಲಿ, ಬರೇಲಿ ಜಿಲ್ಲೆಯ ಡಿಯೋರೇನಿಯಾ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.

ಆರೋಪಿಗಳು ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ ಮತ್ತು ತಮ್ಮ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆಯ ತಂದೆ ಆರೋಪಿಸಿದ್ದಾರೆ.

- Advertisement -

“ಆರೋಪಿ ಪರಾರಿಯಾಗಿದ್ದಾನೆ, ನಾವು ಅವನನ್ನು ಬಂಧಿಸಲು ಪ್ರಯತ್ನಿಸುತ್ತಿದ್ದೇವೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂಸರ್ ಸಿಂಗ್ ಹೇಳಿದ್ದಾರೆ.



Join Whatsapp