Home ಕರಾವಳಿ ಎನ್.ಟಿ.ಎಸ್ ವಿದ್ಯಾರ್ಥಿ ವೇತನಕ್ಕೆ ಪರೀಕ್ಷೆ| ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಆಹ್ವಾನ

ಎನ್.ಟಿ.ಎಸ್ ವಿದ್ಯಾರ್ಥಿ ವೇತನಕ್ಕೆ ಪರೀಕ್ಷೆ| ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಆಹ್ವಾನ

ಎನ್.ಸಿ.ಇ.ಆರ್.ಟಿ ಮಾರ್ಗದರ್ಶನದಲ್ಲಿ ಕ್ಯೂ. ಎಸ್.ಕ್ಯೂ.ಎ.ಎ.ಸಿ ವತಿಯಿಂದ ನಡೆಸಲಾಗುವ ಎನ್.ಟಿ.ಎಸ್ ಮೊದಲನೇ ಹಂತದ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.

2020ರಲ್ಲಿ SSLC ಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಎನ್.ಟಿ.ಎಸ್ ಮೊದಲನೇ ಹಂತದ ಪರೀಕ್ಷೆ ತೆಗೆದುಕೊಳ್ಳಬಹುದಾಗಿದೆ. ಪರೀಕ್ಷೆಯು 2021ನೇ ಜನವರಿ 24ರಂದು ನಡೆಯಲಿದ್ದು, ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಬೇಕೆಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

SSLC ವಿದ್ಯಾರ್ಥಿಗಳು kseeb.kar.nic.in ವೆಬ್ ಸೈಟ್ ಮೂಲಕ ಲಾಗ್ ಇನ್ ಆಗಿ ಎನ್.ಟಿ.ಎಸ್ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಪರೀಕ್ಷೆಗೆ ನವೆಂಬರ್ 30ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಕನ್ನಡ, ಇಂಗ್ಲಿಷ್, ಉರ್ದು ಮತ್ತು ಮರಾಠಿ ಮಾಧ್ಯಮಗಳಲ್ಲಿ ಪರೀಕ್ಷೆ ತೆಗೆದುಕೊಳ್ಳಬಹುದಾಗಿದೆ.

ಪರೀಕ್ಷೆ ಎರಡು ಪತ್ರಿಕೆಗಳನ್ನು ಒಳಗೊಂಡಿದ್ದು, ಬೌದ್ಧಿಕ ಸಾಮರ್ಥ್ಯ ಮತ್ತು ಪ್ರಾಸಂಗಿಕ ಪ್ರವೃತ್ತಿ ಪರೀಕ್ಷೆಗಳು ನಡೆಯಲಿದೆ. ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವಿದೆ. ಮೊದಲ ಹಂತದ ಪರೀಕ್ಷೆ ನಂತರ ದ್ವಿತೀಯ ಹಂತದ ಪರೀಕ್ಷೆ ನಡೆಯಲಿದೆ.

Join Whatsapp
Exit mobile version