ಎಸ್ಸೆಸ್ಸೆಲ್ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ!

Prasthutha|

ಬೆಂಗಳೂರು : 9 ಮತ್ತು 10ನೇ ತರಗತಿ ಆರಂಭಿಸಿರುವ ಬೆನ್ನಲ್ಲೇ ರಾಜ್ಯ ಸರಕಾರ ಈಗ ಎಸ್ಸೆಸ್ಸೆಲ್ಸಿ ಪರೀಕ್ಷಾ ವೇಳಾ ಪಟ್ಟಿ ದಿನಾಂಕವನ್ನು ಪ್ರಕಟಿಸಿದೆ. ಜೂನ್14 ರಿಂದ 25ರವರೆಗೆ ನಡೆಯುವ ಪರೀಕ್ಷೆಯು ಜೂ.14ರಂದು ಪ್ರಥಮ ಭಾಷೆ, ಜೂ.16 ಗಣಿತ , ಜೂ.18ರಂದು ಇಂಗ್ಲೀಷ್ ಹಾಗೂ ಕನ್ನಡ, ಜೂ.21ರಂದು ವಿಜ್ಞಾನ , ಜೂ. 23ರಂದು ಹಿಂದಿ ಹಾಗೂ ಜೂ.25ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ತಾತ್ಕಾಲಿಕ ಪರೀಕ್ಷಾ ವೇಳಾ ಪಟ್ಟಿಯಾಗಿದ್ದು, ಯಾವುದೇ ವಿದ್ಯಾರ್ಥಿ, ಪೋಷಕರಿಗೆ ಈ ವೇಳಾಪಟ್ಟಿಯಲ್ಲಿ ಆಕ್ಷೇಪಗಳಿದ್ದರೇ ಫೆ.26ರೊಳಗೆ ಅರ್ಜಿ ಸಲ್ಲಿಸಬೇಕೆಂದು ಸಚಿವರು ಹೇಳಿದ್ದಾರೆ. ಈ ಹಿಂದೆ ಪರೀಕ್ಷಾ ಸಮಯ 3 ಗಂಟೆ ಇದ್ದು, ಈಗ ಹೆಚ್ಚುವರಿಯಾಗಿ 15 ನಿಮಿಷ ನೀಡಲಾಗಿದೆ.

ಫೆಬ್ರವರಿ1ರಿಂದ 9ನೆ ತರಗತಿ ಹಾಗೂ ಪಿಯುಸಿ ತರಗತಿಗಳು ಪೂರ್ಣ ಪ್ರಮಾಣದಲ್ಲಿ ಪ್ರಾರಂಭಗೊಳ್ಳಲಿವೆ ಎಂದು ಸಚಿವರು ತಿಳಿಸಿದ್ದಾರೆ.

Join Whatsapp