ಮಂಗಳೂರು: ಕೇಂದ್ರ ಸರಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಯ ವಿರುದ್ದ ಹೋರಾಟ ಕೈಗೊಂಡಿರುವ ರೈತರಿಗೆ ಬೆಂಬಲ ವ್ಯಕ್ತಪಡಿಸುವ ಸಲುವಾಗಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ವತಿಯಿಂದ ಗಣರಾಜ್ಯೋತ್ಸವ ದಿನದಂದು ರಾಜ್ಯಾದ್ಯಂತ ರೈತ ಐಕ್ಯತಾ ಸಂಗಮ ಎಂಬ ಹೆಸರಿನಲ್ಲಿ ವಿವಿಧ ರೀತಿಯ ಪ್ರತಿಭಟನೆ ಹಾಗೂ ಕಾರ್ಯಕ್ರಮಗಳು ನಡೆಯಲಿದೆ.
ಅದರ ಅಂಗವಾಗಿ SDPI ದ.ಕ ಜಿಲ್ಲಾ ಸಮಿತಿಯ ವತಿಯಿಂದ ಮಂಗಳೂರಿನ ಲಾಲ್ಬಾಗ್ ನಲ್ಲಿರುವ ಮಹಾನಗರ ಪಾಲಿಕೆ ಕಛೇರಿಯ ಮುಂಭಾಗದಲ್ಲಿ ಜನವರಿ 26 ಮಂಗಳವಾರ ದಂದು ಸಂಜೆ 05:00 ಘಂಟೆಗೆ ರೈತ ಐಕ್ಯತಾ ಸಂಗಮ ಎಂಬ ಹೆಸರಿನಲ್ಲಿ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಯಲಿದೆ ಎಂದು SDPI ಜಿಲ್ಲಾ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.