ಐದು ವರ್ಷಗಳಲ್ಲಿ ದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರೆಷ್ಟು? ಇಲ್ಲಿದೆ ಅಂಕಿ ಅಂಶ!

Prasthutha|

- Advertisement -

ಹೊಸದಿಲ್ಲಿ : 2015-19ರ ಅವಧಿಯಲ್ಲಿ ದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಸಂಖ್ಯೆ 58,783 ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. ಸಂಸದ ಎಎಂ ಆರಿಫ್ ಸದನದಲ್ಲಿ ಎತ್ತಿದ ಪ್ರಶ್ನೆಗೆ ರಾಷ್ಟ್ರೀಯ ಕ್ರೈಂ ರೆಕಾರ್ಡ್ ಬ್ಯೂರೋ ಅಂಕಿಅಂಶಗಳನ್ನು ಪರಿಶೀಲಿಸಿದ ಸಚಿವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ. 2017 ರಲ್ಲಿ 12,602 , 2018 ರಲ್ಲಿ 11,379 ಮತ್ತು 2019 ರಲ್ಲಿ 1,0281 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಂತಹ ರಾಜ್ಯಗಳಲ್ಲಿ ಅತಿ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ಕೃಷಿ ಕಾನೂನುಗಳ ವಿರುದ್ಧ ರೈತರ ಆಂದೋಲನ ತೀವ್ರಗೊಳ್ಳುತ್ತಿದ್ದಂತೆ ರೈತ ಆತ್ಮಹತ್ಯೆಗಳ ಅಂಕಿ ಅಂಶವು ಬಹಿರಂಗಗೊಂಡಿದೆ. ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳು ಕಾರ್ಪೊರೇಟ್‌ಗಳಿಗೆ ಸಹಾಯ ಮಾಡುತ್ತಿದೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ.

Join Whatsapp