ಐಸಿಸಿ T-20 ವಿಶ್ವಕಪ್: ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್, ಬೌಲಿಂಗ್‌ ಆಯ್ಕೆ

Prasthutha|

- Advertisement -

ದುಬೈ: ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ನ್ಯೂಜಿಲೆಂಡ್ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಕೇನ್ ವಿಲಿಯಮ್ಸನ್, ಬೌಲಿಂಗ್‌ ಆಯ್ದುಕೊಂಡಿದ್ದಾರೆ.

ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಪ್ರಮುಖ ಪಾತ್ರ ವಹಿಸಲಿದೆ ಎಂದು ಕ್ರಿಕೆಟ್ ಪಂಡಿತರು ಅಭಿಪ್ರಾಯ ಪಟ್ಟಿದ್ದರು.

- Advertisement -


ಎರಡನೇ ಇನ್ನಿಂಗ್ಸ್ ವೇಳೆ ಇಬ್ಬನಿ ಬೀಳುವ ಕಾರಣ ಬೌಲರ್’ಗಳಿಗೆ ಸಮಸ್ಯೆ ಎದುರಾಗಲಿದ್ದು, ಬ್ಯಾಟರ್’ಗಳಿಗೆ ಅನುಕೂಲವಾಗಲಿದೆ.
ಭಾರತ ತಂಡದಲ್ಲಿ 2 ಬದಲಾವಣೆ
ನ್ಯೂಜಿಲೆಂಡ್ ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಎರಡು ಬದಲಾವಣೆ ಮಾಡಿಕೊಂಡಿದೆ.


ಸೂರ್ಯಕುಮಾರ್ ಯಾದವ್ ಬದಲಿಗೆ ಇಶಾನ್ ಕಿಶನ್ ಹಾಗೂ ಭುವನೇಶ್ವರ್ ಕುಮಾರ್ ಸ್ಥಾನಕ್ಕೆ ಆಲ್ ರೌಂಡರ್ ಶಾರ್ದೂಲ್ ಠಾಕೂರ್ ಎಂಟ್ರಿ ಪಡೆದಿದ್ದಾರೆ.


ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದಲ್ಲಿ ಎರಡು ತಂಡಗಳು ಸೆಮಿಫೈನಲ್ ಹಂತಕ್ಕೆ ತೇರ್ಗಡೆಯಾಗಲಿವೆ. ಗ್ರೂಪ್-2ರಲ್ಲಿ ಈಗಾಗಲೇ ಪಾಕಿಸ್ತಾನ ಮೂರು ಪಂದ್ಯಗಳಲ್ಲಿ ಜಯಭೇರಿ ಬಾರಿಸಿದ್ದು, ಉಳಿದ ಎರಡು ಪಂದ್ಯಗಳಲ್ಲಿ ನಮೀಬಿಯಾ ಹಾಗೂ ಸ್ಕಾಟ್ಲೆಂಡ್ ತಂಡಗಳನ್ನು ಎದುರಿಸಲಿದೆ. ಹೀಗಾಗಿ ಪಾಕಿಸ್ತಾನ ತಂಡದ ಸೆಮಿಫೈನಲ್ ಎಂಟ್ರಿ ಬಹುತೇಕ ಖಚಿತವಾಗಿದೆ. ಉಳಿದಿರುವ ಒಂದು ಸ್ಥಾನಕ್ಕಾಗಿ ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಹೀಗಾಗಿ ಭಾನುವಾರದ ಪಂದ್ಯ ಎರಡೂ ತಂಡಗಳಿಗೂ ಅತ್ಯಂತ ಮಹತ್ವದ್ದಾಗಿದೆ.

ಕಿವೀಸ್ ವಿರುದ್ಧ “ಕೆಟ್ಟ ಇತಿಹಾಸ’’
ಐಸಿಸಿ ಟೂರ್ನಿಗಳಲ್ಲಿ ಟೀಮ್ ಇಂಡಿಯಾ ಕಿವೀಸ್ ವಿರುದ್ಧ ಕಳಪೆ ದಾಖಲೆ ಹೊಂದಿದೆ. 2003ರ ಬಳಿಕ ನ್ಯೂಜಿಲೆಂಡ್ ವಿರುದ್ಧ ಭಾರತ ಐಸಿಸಿ ಟೂರ್ನಿಗಳಲ್ಲಿ ಆಡಿರುವ ಎಲ್ಲಾ ಪಂದ್ಯಗಳಲ್ಲೂ ಸೋಲನುಭವಿಸಿದೆ. 2007, 2016ರ ಟಿ-20 ವಿಶ್ವಕಪ್, 2019ರ ಏಕದಿನ ವಿಶ್ವಕಪ್, ಹಾಗೂ ಕೊನೇಯದಾಗಿ ವಿಶ್ವ ಟೆಸ್ಟ್ ಚಾಂಪಿಯನ್’ಷಿಪ್’ನಲ್ಲೂ ಭಾರತ ಕಿವೀಸ್ ತಂಡಕ್ಕೆ ಶರಣಾಗಿತ್ತು.

Join Whatsapp