ಕರಾವಳಿಯಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ ನಿಧನ

Prasthutha|

ಉಡುಪಿ; ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ (93)  ಇಂದು ಅಸುನೀಗಿದ್ದಾರೆ.

- Advertisement -

ಅಲ್ಪ ಕಾಲದ ಅಸೌಖ್ಯದದಿಂದ ಬಳಲುತ್ತಿದ್ದ ಇವರು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.

ಕೊಡ್ಗಿ, 8 ವರ್ಷ ತಾಲೂಕು ಬೋರ್ಡ್ ಸದಸ್ಯ, ಮಂಗಳೂರು ಜಿಲ್ಲಾ ಪರಿಷತ್ ಸದಸ್ಯ, ಆರ್ಥಿಕ ಸಮಿತಿ ಸದಸ್ಯ, 1972-83ರ ತನಕ ಬೈಂದೂರು ಶಾಸಕ, 2006-08ರ ತನಕ ರಾಜ್ಯ ಮೂರನೇ ಹಣಕಾಸು ಆಯೋಗ ಅಧ್ಯಕ್ಷ ಮುಂತಾದ ಹತ್ತು ಹಲವು ಕ್ಷೇತ್ರಗಳಲ್ಲಿ ಕಾರ್ಯನಿರತಾಗಿದ್ದರು.

- Advertisement -

ಕಾಂಗ್ರೆಸ್‌ ಪಕ್ಷದಲ್ಲಿ ದುಡಿದು 1993ರಲ್ಲಿ ಬಿಜೆಪಿಗೆ ಪಕ್ಷಾಂತರರಾದ ಕೊಡ್ಗಿ, ಬಿಜೆಪಿ ಕುಂದಾಪುರ ತಾಲೂಕು ಅಧ್ಯಕ್ಷ, ಜಿಲ್ಲಾಧ್ಯಕ್ಷ, ರಾಜ್ಯ ಬಿಜೆಪಿ ಉಪಾಧ್ಯಕ್ಷ, ಮಾತ್ರವಲ್ಲ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.



Join Whatsapp