ಉಡುಪಿ; ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ (93) ಇಂದು ಅಸುನೀಗಿದ್ದಾರೆ.
ಅಲ್ಪ ಕಾಲದ ಅಸೌಖ್ಯದದಿಂದ ಬಳಲುತ್ತಿದ್ದ ಇವರು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.
ಕೊಡ್ಗಿ, 8 ವರ್ಷ ತಾಲೂಕು ಬೋರ್ಡ್ ಸದಸ್ಯ, ಮಂಗಳೂರು ಜಿಲ್ಲಾ ಪರಿಷತ್ ಸದಸ್ಯ, ಆರ್ಥಿಕ ಸಮಿತಿ ಸದಸ್ಯ, 1972-83ರ ತನಕ ಬೈಂದೂರು ಶಾಸಕ, 2006-08ರ ತನಕ ರಾಜ್ಯ ಮೂರನೇ ಹಣಕಾಸು ಆಯೋಗ ಅಧ್ಯಕ್ಷ ಮುಂತಾದ ಹತ್ತು ಹಲವು ಕ್ಷೇತ್ರಗಳಲ್ಲಿ ಕಾರ್ಯನಿರತಾಗಿದ್ದರು.
ಕಾಂಗ್ರೆಸ್ ಪಕ್ಷದಲ್ಲಿ ದುಡಿದು 1993ರಲ್ಲಿ ಬಿಜೆಪಿಗೆ ಪಕ್ಷಾಂತರರಾದ ಕೊಡ್ಗಿ, ಬಿಜೆಪಿ ಕುಂದಾಪುರ ತಾಲೂಕು ಅಧ್ಯಕ್ಷ, ಜಿಲ್ಲಾಧ್ಯಕ್ಷ, ರಾಜ್ಯ ಬಿಜೆಪಿ ಉಪಾಧ್ಯಕ್ಷ, ಮಾತ್ರವಲ್ಲ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.