Home ಟಾಪ್ ಸುದ್ದಿಗಳು ಕಾಂಗ್ರೆಸ್ ಗೆದ್ದರೆ ಹಿಂದುಳಿದವರಿಗೆ ಮೀಸಲಾತಿ ಹೆಚ್ಚಳ: ರಾಹುಲ್ ಗಾಂಧಿ

ಕಾಂಗ್ರೆಸ್ ಗೆದ್ದರೆ ಹಿಂದುಳಿದವರಿಗೆ ಮೀಸಲಾತಿ ಹೆಚ್ಚಳ: ರಾಹುಲ್ ಗಾಂಧಿ

ರತ್ಲಾಮ್: ದಲಿತ, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯಗಳ ಜನರಿಗೆ ಮೀಸಲಾತಿ ಕೋಟಾ ಪ್ರಯೋಜನಗಳನ್ನು ಹೆಚ್ಚಿಸಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.


ಮಧ್ಯಪ್ರದೇಶದ ರತ್ಲಾಮ್ ನಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಈ ಚುನಾವಣೆಯಲ್ಲಿ ಸಂವಿಧಾನವನ್ನು ಉಳಿಸಲು ಹೋರಾಡಲಾಗುತ್ತಿದೆ ಎಂದು ಹೇಳಿದರು. ಬಿಜೆಪಿ ಮತ್ತು ಆರೆಸ್ಸೆಸ್ ಸಂವಿಧಾನವನ್ನು ಮುಗಿಸಲು ಬಯಸುತ್ತದೆ. ಇದನ್ನು ಬದಲಾಯಿಸಲು ಬಯಸುತ್ತದೆ. ಆದರೆ, ಕಾಂಗ್ರೆಸ್ ಮತ್ತು ಇಂಡಿಯಾ ಬಣವು ಸಂವಿಧಾನವನ್ನು ಉಳಿಸಲು ಪ್ರಯತ್ನಿಸುತ್ತಿದೆ. ಈ ಸಂವಿಧಾನವು ನಿಮಗೆ ಜಲ (ನೀರು), ಅರಣ್ಯ, ಜಮೀನಿನ ಮೇಲೆ ಹಕ್ಕುಗಳನ್ನು ನೀಡಿದೆ. ನರೇಂದ್ರ ಮೋದಿ ಆ ಹಕ್ಕುಗಳನ್ನು ತೆಗೆದುಹಾಕಲು ಬಯಸಿದ್ದಾರೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

Join Whatsapp
Exit mobile version