ಕಾಡಾನೆ ದಾಳಿ: ಅರಣ್ಯ ಇಲಾಖೆ ಸಿಬ್ಬಂದಿಗೆ ಗಂಭೀರ ಗಾಯ

Prasthutha|

ಕಡಬ: ಅರಣ್ಯ ಪ್ರದೇಶದ ನೆಡುತೋಪಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಇಂದು ಬೆಳಿಗ್ಗೆ ಕಡಬ ತಾಲೂಕಿನ ನೂಜಿ ಬಾಳ್ತಿಲ ಗ್ರಾಮದ ಬಳಕ್ಕ ಎಂಬಲ್ಲಿ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಹಾವೇರಿಯ ಹಾನಗಲ್ ತಾಲೂಕಿನ ರೇವಪ್ಪ ಎಂದು ಗುರುತಿಸಲಾಗಿದೆ.
ನೆಡುತೋಪಿನಲ್ಲಿ ಗಿಡ ನೆಡುವ ಕೆಲಸ ಮಾಡುತ್ತಿದ್ದ ವೇಳೆ ಹಠಾತ್ತನೆ ನಡೆದ ಕಾಡಾನೆ ದಾಳಿಯಿಂದ ಅವರ ತಲೆ ಮತ್ತು ಸೊಂಟಕ್ಕೆ ಗಂಭೀರ ಗಾಯಗಳಾಗಿವೆ. ಅರಣ್ಯಾದಿಕಾರಿಗಳು ಮತ್ತು ಗ್ರಾಮ ಪಂಚಾಯತ್ ಸದಸ್ಯರು ಸ್ಥಳಕ್ಕಾಗಮಿಸಿದ್ದು, ಗಾಯಗೊಂಡ ವ್ಯಕ್ತಿಯನ್ನು ಉತ್ತಮ ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಭಾಗದಲ್ಲಿ ಕಾಡಾನೆ ದಾಳಿ ಹೆಚ್ಚುತ್ತಿದ್ದು ಸುತ್ತಮುತ್ತಲಿನ ಕೃಷಿಕರು ಅರಣ್ಯ ಇಲಾಖೆಗೆ ಅನೇಕ ಬಾರಿ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಲಿಲ್ಲ .ಇದೀಗ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆದಿರುವುದರಿಂದ ಈ ಭಾಗದ ಜನ ಭಯ ಭೀತರಾಗಿ ಬದುಕುವ ಪರಿಸ್ಥಿತಿ ಎದುರಾಗಿದೆ. ಅರಣ್ಯಾಧಿಕಾರಿಗಳು ಆದಷ್ಟು ಬೇಗ ಈ ಸಮಸ್ಯೆಯನ್ನು ಬಗೆಹರಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Join Whatsapp