ಮುಜರಾಯಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಪ್ರಯಾಣಿಸುತ್ತಿದ್ದ ಕಾರಿಗೆ ಕೆಎಸ್ಸಾರ್ಟಿಸಿ ಬಸ್ಸೊಂದು ಢಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರು ನೈಸ್ ರಸ್ತೆ ವೃತ್ತದ ಬಳಿಯ ಕದಂಬ ಹೊಟೇಲ್ ಬಳಿ ಈ ಘಟನೆ ನಡೆದಿದ್ದು, ಸಚಿವರು ಮೈಸೂರಿನಿಂದ ಬೆಂಗಳೂರಿಗೆ ಮರಳುತ್ತಿದ್ದರು ಎಂದು ಹೇಳಲಾಗಿದೆ. ಜೊತೆಗಿದ್ದ ಕಾರು ಚಾಲಕನಿಗೂ ಸುರಕ್ಷಿತವಾಗಿದ್ದಾನೆ. ಇದೀಗ ಸಚಿವರನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಕುಂಬಳಗೋಡು ಪೊಲೀಸ್ ಠಾಣಾ ಪೊಲೀಸರು ಸೂಕ್ತ ಕ್ರಮ ಕೈಗೊಂಡಿದ್ದಾರೆ.