ಮಡಿಕೇರಿ, ಜು.19: ಕೊಡಗು ಜಿಲ್ಲೆಯ ಗಡಿ ಪ್ರದೇಶ ಪೆರುಂಬಾಡಿ ಎಂಬಲ್ಲಿ ಸರ್ಕಾರಿ ಐರಾವತ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟು ಇತರ ಹಲವರು ಗಾಯಗೊಂಡಿರುವ ಘಟನೆ ಸೋಮವಾರ ಮುಂಜಾನೆ ನಡೆದಿದೆ.
ಬೆಂಗಳೂರು ಮೂಲದ ಚಾಲಕ ಸ್ವಾಮಿ ಮೃತಪಟ್ಟವರು.
ಪೆರುಂಬಾಡಿಯಿಂದ 8 ಕಿಲೋ ಮೀಟರ್ ದೂರದಲ್ಲಿ ಬಸ್, ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ನ ಮುಂಭಾಗ ನಜ್ಜುಗುಜ್ಜಾಗಿದೆ.
ಕೇರಳ ಟಾಸ್ಕ್ ಪೋರ್ಸ್ ಸಿಬ್ಬಂದಿ ಸತತ ನಾಲ್ಕು ಗಂಟೆಗಳ ಕಾರ್ಯಾಚರಣೆ ನಡೆಸಿ ಬಸ್ ನ ಸ್ಟೇರಿಂಗ್ ಅಡಿಗೆ ಸಿಲುಕಿದ್ದ ಚಾಲಕನನ್ನು ಹೊರ ತೆಗೆದರು. ಅಷ್ಟರಲ್ಲೇ ಚಾಲಕ ಮೃತಪಟ್ಟಿದ್ದರು.
ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.