ಮಡಿಕೇರಿ: ಇಂದು ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಕೊಡಗು ಜಿಲ್ಲೆಗೆ ಶೇ.86.48ರಷ್ಟು ಫಲಿತಾಂಶ ಲಭ್ಯವಾಗಿದೆ.
ಕೊಡಗು ಜಿಲ್ಲೆಯಲ್ಲಿ 6,710 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದು, 3,088 ಬಾಲಕಿಯರು ಮತ್ತು 2,715 ಬಾಲಕರು ಸೇರಿ ಒಟ್ಟು 5,803 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ತಾಲೂಕುವಾರು ಫಲಿತಾಂಶ ಗಮನಿಸಿದಾಗ ಮಡಿಕೇರಿ ತಾಲೂಕಿನಲ್ಲಿ ಪರೀಕ್ಷೆಗೆ ಹಾಜರಾದ 1937 ವಿದ್ಯಾರ್ಥಿಗಳಲ್ಲಿ 1,756ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.90.60ರಷ್ಟು ಫಲಿತಾಂಶ ಲಭ್ಯವಾಗಿದೆ. ಸೋಮವಾರಪೇಟೆ ತಾಲೂಕಿನಲ್ಲಿ ಪರೀಕ್ಷೆಗೆ ಹಾಜರಾದ 2,703 ವಿದ್ಯಾರ್ಥಿಗಳಲ್ಲಿ 2,304 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.85.24 ರಷ್ಟು ಫಲಿತಾಂಶ ದೊರೆತಿದೆ.
ವೀರಾಜಪೇಟೆ ತಾಲೂಕಿನಲ್ಲಿ ಪರೀಕ್ಷೆಗೆ ಹಾಜರಾದ 2,070 ವಿದ್ಯಾರ್ಥಿಗಳಲ್ಲಿ 1,743 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.84.20 ರಷ್ಟು ಫಲಿತಾಂಶ ಬಂದಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ವೇದಮೂರ್ತಿ ತಿಳಿಸಿದ್ದಾರೆ.