ನನಗೆ ಕೊರೋನಾ ಬಂದರೆ ನಾನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಅಪ್ಪಿಕೊಳ್ಳುವುದಾಗಿ ಬೆದರಿಸಿದ್ದ ಪಶ್ಚಿಮ ಬಂಗಾಳ ಬಿಜೆಪಿ ನಾಯಕ ಹಾಗೂ ಬಿಜೆಪಿ ರಾಷ್ಟ್ರಿಯ ಕಾರ್ಯದರ್ಶಿ ಅನುಪಮ್ ಹಝ್ರಾಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಕೆಲ ದಿನಗಳ ಹಿಂದೆ ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅನುಪಮ್ ಹಝ್ರಾ, “ನನಗೆ ಕೊರೋನಾ ಆದರೆ ನಾನು ಮಮತಾ ಅವರನ್ನು ಅಪ್ಪಿಕೊಳ್ಳುತ್ತೇನೆ” ಎಂದು ಹೇಳಿ ವಿಕೃತಿ ಮೆರೆದಿದ್ದ.
ಇತ್ತೀಚೆಗೆ ಹಝ್ರಾನ ಆರೋಗ್ಯದಲ್ಲಿ ಏರುಪೇರಾಗಿದ್ದ ಕಾರಣಕ್ಕೆ ಅವನನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ. ಇದೀಗ ಬಂದ ಪರೀಕ್ಷಾ ವರದಿಯು ಹಝ್ರಾನಿಗೆ ಕೊರೋನಾ ಪಾಸಿಟಿವ್ ದೃಢಪಡಿಸಿದೆ.