ಕೋವಿಡ್ ಲಸಿಕೆಯಲ್ಲೂ ಮೋದಿ ಚಿತ್ರ । ಪ್ರಧಾನಿ ವಿರುದ್ಧ ಚುನಾವಣಾ ಆಯೋಗಕ್ಕೆ ಟಿಎಂಸಿ ದೂರು

Prasthutha|

- Advertisement -

ಟಿಎಂಸಿ ನಾಯಕರ ನಿಯೋಗವೊಂದು ಬುಧವಾರ ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿಯಾಗಿ ಪ್ರಧಾನಿ ಮೋದಿಯವರ ವಿರುದ್ಧ ದೂರು ನೀಡಿದ್ದಾರೆ. ವಿವಿಧ ಯೋಜನೆಗಳ ಜಾಹೀರಾತುಗಳಲ್ಲಿ ಮಾತ್ರವಲ್ಲ ಕೇಂದ್ರ ಆರೋಗ್ಯ ಸಚಿವಾಲಯ ವಿತರಿಸಿದ ಕೋವಿಡ್ ಲಸಿಕೆಯಲ್ಲೂ ಮೋದಿಯವರ ಫೋಟೋ ಬಳಸಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಇದೆಲ್ಲವೂ ಆಡಳಿತ ಪಕ್ಷದ ಅಧಿಕಾರ ದುರುಪಯೋಗ ಎಂದು ಬಣ್ಣಿಸಿದ ಟಿಎಂಸಿ, ಪೆಟ್ರೋಲ್ ಪಂಪ್ ಗಳಲ್ಲಿ ಮೋದಿಯವರ ಚಿತ್ರದೊಂದಿಗೆ ಕೇಂದ್ರ ಸರಕಾರದ ಯೋಜನೆಗಳನ್ನು ಬಿತ್ತರಿಸುತ್ತಿದೆ . ಪ್ರಧಾನಿ ನರೇಂದ್ರ ಮೋದಿ ಅವರು ಈ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಸ್ಟಾರ್ ಪ್ರಚಾರಕರಾಗಿದ್ದಾರೆ. ವ್ಯಾಕ್ಸಿನೇಷನ್ ಪ್ರಮಾಣಪತ್ರಗಳಲ್ಲೂ ಅವರ ಫೋಟೋವನ್ನು ಬಳಸುವುದು ಎಷ್ಟರ ಮಟ್ಟಿಗೆ ಸರಿ? ಮತ್ತು ಇದು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತದಲ್ಲವೇ ಎಂದು ಕಿಡಿಕಾರಿದ್ದಾರೆ. ಲಸಿಕೆ ,ಪೆಟ್ರೋಲ್ ಪಂಪ್ ಮುಂತಾದವುಗಳಲ್ಲಿ ಮೋದಿಯವರ ಜಾಹಿರಾತಿನ ಬೋರ್ಡನ್ನು ಕಿತ್ತು ಹಾಕಬೇಕು. ಚುನಾವಣಾ ಸಂದರ್ಭದಲ್ಲಿ ಅದು ಜನರ ಮೇಲೆ ಪ್ರಭಾವ ಬೀರಬಹುದು ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

Join Whatsapp