ನವದೆಹಲಿ: ಡಿಸೆಂಬರ್ 25ರಂದು ಪ್ರಧಾನಿ ನರೇಂದ್ರ ಮೋದಿ ಅವರು ಆರು ರಾಜ್ಯದ ರೈತರೊಂದಿಗೆ ಸಭೆ ನಡೆಸಲಿದ್ದು, 9 ಕೋಟಿ ರೈತರನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಕೃಷಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆ ದಿನೇದಿನೆ ಹೆಚ್ಚುತ್ತಲೇ ಇದೆ. ಕೇಂದ್ರದೊಂದಿಗಿನ ಎಲ್ಲಾ ಮಾತುಕತೆಯು ಹಲವು ಬಾರಿ ವಿಫಲವಾಗಿದ್ದು, ಇದೀಗ ರೈತರೊಂದಿಗೆ ಮಾತನಾಡಲು ಪ್ರಧಾನಿ ನಿರ್ಧರಿಸಿದ್ದಾರೆ.
ದೇಶದಲ್ಲಿ ರೈತರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಕುರಿತ ಅನುಭವವನ್ನು ರೈತರು ಪ್ರಧಾನಿಯೊಂದಿಗೆ ಹಂಚಿಕೊಳ್ಳಲಿದ್ದಾರೆ. ನೂತನ ಕೃಷಿ ಕಾಯ್ದೆಗಳ ಬಗ್ಗೆಯೂ ಮೋದಿಯವರು ಮಾತನಾಡಲಿದ್ದಾರೆ.
ಜೊತೆಗೆ ಪಿಎಂ ಕಿಸಾನ್ ಯೋಜನೆಯ 18,000 ಕೋಟಿ ರೂ. ಆರ್ಥಿಕ ಸಹಾಯವನ್ನೂ ಬಿಡುಗಡೆ ಮಾಡಲಿದ್ದಾರೆ.