ಗದಗ: ನಗರ ಸಭಾ ಉಪಾಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ!

Prasthutha|

ಗದಗ: ಬೆಳ್ಳಂಬೆಳಿಗೆ ಬೆಚ್ಚಿಬೀಳಿಸುವ ಸುದ್ದಿ ಹೊರಬಿದ್ದಿದ್ದು, ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಮಲಗಿದಲ್ಲೇ ಭೀಕರವಾಗಿ ಹತ್ಯೆ ಮಾಡಲಾಗಿದೆ. ಈ ಆಘಾತಕಾರಿ ಘಟನೆ ಗದಗದ ನಗರದ ದಾಸರ ಓಣಿಯಲ್ಲಿ ನಡೆದಿದೆ.

- Advertisement -

ನಗರ ಸಭೆಯ ಉಪಾಧ್ಯಕ್ಷೆ ಸುನಂದಾ ಬಾಕಳೆಯವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪರಶುರಾಮ ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಯಾದವರು.

ಶ್ವಾನದಳದೊಂದಿಗೆ ಘಟನಾ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಪೊಲೀಸರು ಇಂಚಿಂಚು ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಹೆಚ್ಚುವರಿ ಪೊಲೀಸ್​ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ಡಿವೈಎಸ್ಪಿ, ಸಿಪಿಐ ಸೇರಿ ಹಲವು ಅಧಿಕಾರಿಗಳು ಬಂದಿದ್ದಾರೆ.

Join Whatsapp