Home ಕ್ರೀಡೆ ಗುಜರಾತ್ ಟೈಟನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್‌ ಬೆಂಗಳೂರುಗೆ ಭರ್ಜರಿ ಗೆಲುವು

ಗುಜರಾತ್ ಟೈಟನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್‌ ಬೆಂಗಳೂರುಗೆ ಭರ್ಜರಿ ಗೆಲುವು

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ 2024ರ ಐಪಿಎಲ್ 52ನೇ ಪಂದ್ಯದಲ್ಲಿ ಆತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಗುಜರಾತ್ ಟೈಟನ್ಸ್ (ಜಿಟಿ) ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಗುಜರಾತ್ ಟೈಟನ್ಸ್ ತಂಡ ಆರ್‌ಸಿಬಿ ತಂಡದ ಬೌಲಿಂಗ್ ತತ್ತರಿಸಿ ಹೋಗಿತ್ತು. ಯಾವುದೇ ಶತಕ, ಅರ್ಧಶತಕವಿಲ್ಲದೆ 19.3 ಓವರ್‌ಗಳಲ್ಲಿ 147 ರನ್‌ಗಳಿಗೆ ಎಲ್ಲಾ ವಿಕೆಟ್ ಕಳೆದುಕೊಂಡು ಶರಣಾಗಿತ್ತು.

148 ರನ್‌ಗಳ ಸಾಧಾರಣ ಗುರಿ ಬೆನ್ನಟ್ಟಿದ ಆರ್‌ಸಿಬಿ ತಂಡ ಫಾಫ್ ಡು ಪ್ಲೆಸಿಸ್ ಅರ್ಧಶತಕ ಮತ್ತು ವಿರಾಟ್ ಕೊಹ್ಲಿಯ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ 13.4 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 152 ರನ್ ಗಳಿಸಿ ಗೆಲುವಿನ ನಗೆ ನಕ್ಕಿತು.

Join Whatsapp
Exit mobile version