‘ಗೋಲಿ ಮಾರೊ’ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿದ ಪೊಲೀಸ್ ಅಧಿಕಾರಿ ರಾಜೀನಾಮೆ

Prasthutha|

- Advertisement -

ಕಳೆದ ವಾರ ಪಶ್ಚಿಮ ಬಂಗಾಳದಲ್ಲಿ ನಡೆದ ರ‍್ಯಾಲಿಯಲ್ಲಿ ‘ಗೋಲಿ ಮಾರೊ’ ಎಂದು ಘೋಷಣೆಗಳನ್ನು ಕೂಗಿದ್ದ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲು ಆದೇಶಿಸಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ರಾಜೀನಾಮೆ ನೀಡಿದ್ದಾರೆ. ಕೋಲ್ಕತ್ತಾ ಬಳಿಯ ಚಂದನಗರದ ಪೊಲೀಸ್ ಆಯುಕ್ತ ಹುಮಾಯೂನ್ ಕಬೀರ್ ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ್ದಾರೆ. ಆದರೆ ಹುಮಾಯೂನ್ ಕಬೀರ್ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ತಮ್ಮ ರಾಜೀನಾಮೆಯ ಹಿಂದಿನ ಕಾರಣಗಳನ್ನು ಕೆಲವೇ ದಿನಗಳಲ್ಲಿ ಸ್ಪಷ್ಟಪಡಿಸಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಅದೇ ವೇಳೆ ರಾಜಕೀಯ ಪ್ರವೇಶಿಸುವ ಉದ್ದೇಶದಿಂದ ಕಬೀರ್ ಈ ಹಿಂದೆ ಏಪ್ರಿಲ್ 30 ರಂದು ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿದ್ದರು ಎಂಬ ವದಂತಿಗಳು ಕೇಳಿ ಬರುತ್ತಿದೆ. ಮಮತಾ ಬ್ಯಾನರ್ಜಿಯೊಂದಿಗೆ ಆಪ್ತರಾಗಿದ್ದ ಹುಮಾಯೂನ್ ಕಬೀರ್ ಮುಂಬರುವ ಚುನಾವಣೆಯಲ್ಲಿ ತಮ್ಮ ಪತ್ನಿಯನ್ನು ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಬಿಜೆಪಿ ಹೇಳಿತ್ತು. ಆದರೆ ಹುಮಾಯೂನ್ ಕಬೀರ್ ಬಿಜೆಪಿಗೆ ಸೇರಲು ತಯಾರಿ ನಡೆಸುತ್ತಿದ್ದಾರೆ ಎಂಬ ಮಾತುಗಳೂ ಕೇಳಿ ಬರುತ್ತಿದೆ. ಆದರೆ ಕಬೀರ್ ಇನ್ನೂ ವದಂತಿಗಳಿಗೆ ಯಾವುದೇ ಸ್ಪಷ್ಟನೆ ನೀಡಿಲ್ಲ.

- Advertisement -

ಈ ತಿಂಗಳ 21 ರಂದು ನಡೆದ ರ‍್ಯಾಲಿಯಲ್ಲಿ ‘ಗೋಲಿ ಮಾರೊ’ ಎಂದು ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತರನ್ನು ಗಲಭೆಗೆ ಸಂಚು ರೂಪಿಸಿದ್ದಾರೆಂದು ಆರೋಪಿಸಿ ಬಂಧಿಸಲು ಹುಮಾಯೂನ್ ಕಬೀರ್ ನೇತೃತ್ವ ನೀಡಿದ್ದರು.

Join Whatsapp