ಗೋಹತ್ಯೆ ನಿಷೇಧ, ಲವ್ ಜಿಹಾದ್ ತಡೆ ಕಾಯ್ದೆ ಜಾರಿಗೊಳಿಸುವುದು ನೀತಿ ಸಂಹಿತೆ ಉಲ್ಲಂಘನೆ: ಸಿದ್ಧರಾಮಯ್ಯ

Prasthutha|

ಸರಕಾರವು ಗೊಹತ್ಯೆ ನಿಷೇಧ ಕಾಯ್ದೆ ಮತ್ತು ಲವ್ ಜಿಹಾದ್ ತಡೆ ಕಾಯ್ದೆಗಳನ್ನುಜಾರಿಗೊಳಿಸಿದರೆ ನೀತಿಸಂಹಿತೆಯ ಉಲ್ಲಂಘನೆಯಾಗಲಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

ನಾಳೆಯಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಈ ಸಂದರ್ಭದಲ್ಲಿ ಈ ಕಾಯ್ದೆಗಳನ್ನು ಜಾರಿಗೊಳಿಸಿದರೆ ಮತದಾರರ ಮೇಲೆ ಪರಿಣಾಮ ಬೀಳಲಿದೆ ಎಂದು ಅವರು ಹೇಳಿದ್ದಾರೆ.

ನಾಳೆಯಿಂದ ವಿಧಾನಸಭಾ ಅಧಿವೇಶನ ಆರಂಭವಾಗಲಿದ್ದು, ಅಧಿವೇಶನದಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಶ್ವೇತಪತ್ರ ಹೊರಡಿಸುವಂತೆ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ.

- Advertisement -

ಯಾವುದೇ ಕಾರಣಕ್ಕೂ ರೈತವಿರೋಧಿ, ಜನವಿರೋಧಿ ಕಾಯ್ದೆಗಳ ಜಾರಿಗೆ ನಾವು ಅವಕಾಶ ನೀಡುವುದಿಲ್ಲ. ಈ ಬಾರಿಯ ಅಧಿವೇಶನದಲ್ಲಿ ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಮತ್ತು ಕಾರ್ಮಿಕ ತಿದ್ದುಪಡಿ ಕಾಯ್ದೆಗಳ ಬಗ್ಗೆ ದೀರ್ಘ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ.

Join Whatsapp