ಸರಕಾರವು ಗೊಹತ್ಯೆ ನಿಷೇಧ ಕಾಯ್ದೆ ಮತ್ತು ಲವ್ ಜಿಹಾದ್ ತಡೆ ಕಾಯ್ದೆಗಳನ್ನುಜಾರಿಗೊಳಿಸಿದರೆ ನೀತಿಸಂಹಿತೆಯ ಉಲ್ಲಂಘನೆಯಾಗಲಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ನಾಳೆಯಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಈ ಸಂದರ್ಭದಲ್ಲಿ ಈ ಕಾಯ್ದೆಗಳನ್ನು ಜಾರಿಗೊಳಿಸಿದರೆ ಮತದಾರರ ಮೇಲೆ ಪರಿಣಾಮ ಬೀಳಲಿದೆ ಎಂದು ಅವರು ಹೇಳಿದ್ದಾರೆ.
ನಾಳೆಯಿಂದ ವಿಧಾನಸಭಾ ಅಧಿವೇಶನ ಆರಂಭವಾಗಲಿದ್ದು, ಅಧಿವೇಶನದಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಶ್ವೇತಪತ್ರ ಹೊರಡಿಸುವಂತೆ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಯಾವುದೇ ಕಾರಣಕ್ಕೂ ರೈತವಿರೋಧಿ, ಜನವಿರೋಧಿ ಕಾಯ್ದೆಗಳ ಜಾರಿಗೆ ನಾವು ಅವಕಾಶ ನೀಡುವುದಿಲ್ಲ. ಈ ಬಾರಿಯ ಅಧಿವೇಶನದಲ್ಲಿ ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಮತ್ತು ಕಾರ್ಮಿಕ ತಿದ್ದುಪಡಿ ಕಾಯ್ದೆಗಳ ಬಗ್ಗೆ ದೀರ್ಘ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ.