ಚಲಿಸುತ್ತಿದ್ದ ರೈಲಿನಿಂದ ಬಿದ್ದ ಪ್ರಯಾಣಿಕಳ ಪ್ರಾಣ ಉಳಿಸಿದ ಮಹಿಳಾ ಪೇದೆ ; ವಿಡಿಯೋ ವೈರಲ್

Prasthutha|

- Advertisement -

ಲಕ್ನೋ : ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಹಿಳೆಯನ್ನು ಮಹಿಳಾ ಪೇದೆಯೊಬ್ಬರು ರಕ್ಷಿಸಿದ ಘಟನೆ ನಡೆದಿದೆ. ಮಹಿಳೆಯನ್ನು ರಕ್ಷಿಸಿದ ವಿಡಿಯೋ ವೈರಲ್ ಆದ ಬಳಿಕ ಪೊಲೀಸ್ ಪೇದೆಯನ್ನು ಹೀರೋ ಎಂದು ಕೊಂಡಾಡಲಾಗಿದೆ.

ಈ ವೈರಲ್ ವಿಡಿಯೋವನ್ನು ರೈಲ್ವೇ ಸಚಿವಾಲಯ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಚಲಿಸುವ ರೈಲನ್ನು ಹತ್ತದಂತೆ ಪ್ರಯಾಣಿಕರಿಗೆ ಎಚ್ಚರಿಕೆ ನೀಡಲಾಗಿದೆ. ‘ ಲಕ್ನೋ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಲ್ಲಿ ಮಹಿಳಾ ಪ್ರಯಾಣಿಕರೊಬ್ಬರು ಬಿದ್ದಾಗ ಕರ್ತವ್ಯದಲ್ಲಿದ್ದ ಪೇದೆ ವಿನಿತಾ ಕುಮಾರಿ ತಕ್ಷಣ ಕಾರ್ಯಾಚರಣೆ ನಡೆಸಿ ಆಕೆಯನ್ನು ರಕ್ಷಿಸಿದ್ದಾರೆ. ಚಲಿಸುವ ರೈಲನ್ನು ಹತ್ತಲು ಪ್ರಯತ್ನಿಸಬೇಡಿ, ಅದು ನಿಮ್ಮ ಪ್ರಾಣಾಪಾಯಕ್ಕೆ ಕಾರಣವಾಗಬಹುದು’ ಎಂದು ಟ್ವಿಟ್ಟರ್ ನಲ್ಲಿ ಮನವಿ ಮಾಡಲಾಗಿದೆ.     

Join Whatsapp