‘ಜನರಲ್ ಡಯರ್ ಆಗಲು ನಿಮಗೆ ಅಧಿಕಾರ ನೀಡಿದವರು ಯಾರು?’ : ತೇಜಸ್ವಿ ಯಾದವ್

Prasthutha|

- Advertisement -

ಬಿಹಾರದ ಮುಂಗರ್ ನಲ್ಲಿ 18 ವರ್ಷದ ಬಾಲಕನನ್ನು ಗುಂಡಿಕ್ಕಿ ಹತ್ಯೆಗೈದ ಘಟನೆಗೆ ಸಂಬಂಧಿಸಿ ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್ ಸೋಮವಾರ ನಿತೀಶ್ ಕುಮಾರ್ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತೇಜಸ್ವಿ ಯಾದವ್ ಮುಂಗರ್ ನಲ್ಲಿ ನಡೆದ ಪೊಲೀಸ್ ದೌರ್ಜನ್ಯವನ್ನು 1919 ರಲ್ಲಿ ಜನರಲ್ ಡಯರ್ ನೇತೃತ್ವದ ಜಲಿಯನ್ ವಾಲಾ ಭಾಗ್ ನಲ್ಲಿ ನಡೆದ ಹತ್ಯಾಕಾಂಡಕ್ಕೆ ಹೋಲಿಸಿದ್ದಾರೆ.

- Advertisement -

“ಬಿಹಾರದ ಮುಖ್ಯಮಂತ್ರಿ ಏನು ಮಾಡುತ್ತಿದ್ದಾರೆ? ಬಿಜೆಪಿಯ ಮುಖಂಡನೂ ಉಪಮುಖ್ಯಮಂತ್ರಿಯೂ ಆದ ಸುಶೀಲ್ ಕುಮಾರ್ ಮೋದಿ ಏನು ಮಾಡುತ್ತಿದ್ದಾರೆ?” ಜನರಲ್ ಡಯರ್ ಆಗಲು ಪೊಲೀಸರಿಗೆ ಅಧಿಕಾರ ನೀಡಿದವರು ಯಾರು? ಸರಕಾರ ಕ್ರಮ ಕೈಗೊಳ್ಳದಿರುವುದರಿಂದ ಈ ಘಟನೆಯಲ್ಲಿ ಅವರ ಪಾತ್ರವೂ ಇದೆ ಎಂಬುದು ಸ್ಪಷ್ಟವಾಗಿದೆ. ಸರಕಾರವು ಕ್ರಿಮಿನಲ್ ಗಳಿಗೆ ಶರಣಾಗಿದೆ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.

ಮುಂಗರ್ ನಲ್ಲಿ ದುರ್ಗಾ ಪೂಜೆಯ ಸಂಭ್ರಮಾಚರಣೆಯಲ್ಲಿ ಈ ಘಟನೆ ನಡೆದಿದೆ. ವಿಗ್ರಹವನ್ನು ವಿಸರ್ಜನೆ ನಡೆಸುತ್ತಿದ್ದ ಸಂದರ್ಭ ಪೊಲೀಸರು ಮತ್ತು ಸ್ಥಳಿಯರ ನಡುವೆ ಘರ್ಷಣೆ ನಡೆದಿದೆ. ಪೊಲೀಸರ ಗುಂಡಿನ ದಾಳಿಗೆ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಹಲವಾರು ಜನರು ಸಾವನ್ನಪ್ಪಿದ್ದಾರೆ. ಕೆಲವು ಸಮಾಜಘಾತುಕರು ಕಲ್ಲು ತೂರಾಟ ನಡೆಸಿರುವುದೇ ಘರ್ಷಣೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಬಿಹಾರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಪ್ರತಿಪಕ್ಷಗಳು ಟೀಕಿಸಿವೆ. ನಿತೀಶ್ ಕುಮಾರ್ ಸರಕಾರವನ್ನು ವಿಸರ್ಜಿಸಲು ಪ್ರತಿಪಕ್ಷಗಳು ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದೆ.



Join Whatsapp