ಕೇಂದ್ರ ಆರೋಗ್ಯ ಸಚಿವಾಲಯ ಜನವರಿ 31ರಂದು ಪೋಲಿಯೋ ರಾಷ್ಟ್ರೀಯ ರೋಗನಿರೋಧಕ ದಿನವನ್ನಾಗಿ ನಿಗದಿಪಡಿಸಿದೆ. ಈ ಮೊದಲು ಅದನ್ನು ಜನವರಿ 17ಕ್ಕೆ ನಿಗದಿಪಡಿಸಲಾಗಿತ್ತು.
ಜ.31ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ರಾಷ್ಟ್ರಪತಿ ಭವನದಲ್ಲಿ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಿ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.
ರಾಷ್ಟ್ರಪತಿಗಳ ಅನುಮತಿ ಪಡೆದು ‘ಪೋಲಿಯೋ ರವಿವಾರ’ ನಿಗದಿಪಡಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಕೋವಿಡ್ ನಿರ್ವಹಣೆ ಮತ್ತು ಲಸಿಕೆ ಸೇವೆಗಳು, ಕೋವಿಡ್ ಅಲ್ಲದ ಅಗತ್ಯ ಆರೋಗ್ಯ ಸೇವೆಗಳು ಪರಸ್ಪರ ಪ್ರತಿಕೂಲ ಪರಿಣಾಮ ಬೀರದಂತೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.