Home ಟಾಪ್ ಸುದ್ದಿಗಳು ಜಾತಿ ರಾಜಕಾರಣ ಹೆಸರಿನಲ್ಲಿ ಕೆಲವರು ಶಾಂತಿ ಕದಡಲು ಯತ್ನಿಸುತ್ತಿದ್ದಾರೆ: ಪ್ರಧಾನಿ ಮೋದಿ

ಜಾತಿ ರಾಜಕಾರಣ ಹೆಸರಿನಲ್ಲಿ ಕೆಲವರು ಶಾಂತಿ ಕದಡಲು ಯತ್ನಿಸುತ್ತಿದ್ದಾರೆ: ಪ್ರಧಾನಿ ಮೋದಿ

ನವದೆಹಲಿ: ಜಾತಿ ರಾಜಕಾರಣ ಹೆಸರಿನಲ್ಲಿ ಕೆಲವರು ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದ್ದಾರೆ ಎಂದಿರುವ ಪ್ರಧಾನಿ ನರೇಂದ್ರ ಮೋದಿ, ದೇಶದ ಗ್ರಾಮೀಣ ಭಾಗಗಳಲ್ಲಿ ಸಾಮಾಜಿಕ ಸೌಹಾರ್ದತೆಯನ್ನು ಕಾಪಾಡಲು ಇಂತಹ ಕುಕೃತ್ಯಗಳನ್ನು ವಿಫಲಗೊಳಿಸುವಂತೆ ಕರೆ ನೀಡಿದ್ದಾರೆ.

ಇಂದು ದೆಹಲಿಯಲ್ಲಿ ಗ್ರಾಮೀಣ ಭಾರತ ಮಹೋತ್ಸವವನ್ನು ಉದ್ಘಾಟಿಸಿದ ಪ್ರಧಾನಿ, 2047 ರ ವೇಳೆಗೆ ವಿಕಸಿತ ಭಾರತ ಕನಸನ್ನು ಮುಂದಕ್ಕೆ ತೆಗೆದುಕೊಂಡು ಹೋಗುವಲ್ಲಿ ಗ್ರಾಮಗಳು ಪ್ರಮುಖ ಪಾತ್ರ ವಹಿಸಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಾತಿ ರಾಜಕಾರಣದ ವಿಷವನ್ನು ಹರಡುವ ಮೂಲಕ ಕೆಲವರು ಶಾಂತಿ ಕದಡಲು ಪ್ರಯತ್ನಿಸುತ್ತಿದ್ದಾರೆ ಎಂದು ಯಾರ ಹೆಸರನ್ನು ಉಲ್ಲೇಖಿಸದೆ ಮೋದಿ ಹೇಳಿದರು. ಗ್ರಾಮಗಳಲ್ಲಿ ಶಾಂತಿ ಸೌಹಾರ್ದತೆಯ ಪರಂಪರೆಯನ್ನು ಬಲಪಡಿಸುವ ಕೆಲಸ ಮಾಡಬೇಕಾಗಿದೆ ಎಂದರು.

2014 ರಿಂದ ಎನ್‌ ಡಿಎ ಸರ್ಕಾರವು ಗ್ರಾಮೀಣಾಭಿವೃದ್ಧಿಗಾಗಿ ಕೈಗೊಂಡ ಕ್ರಮಗಳನ್ನು ನೆನಪಿಸಿಕೊಂಡ ಮೋದಿ, ಎಸ್‌ ಬಿಐ ಸಂಶೋಧನಾ ವರದಿಯನ್ನು ಉಲ್ಲೇಖಿಸಿ, ಗ್ರಾಮೀಣ ಭಾರತದಲ್ಲಿ ಬಡತನವು 2012 ರಲ್ಲಿ ಶೇಕಡಾ 26 ರಿಂದ ಈಗ ಶೇಕಡಾ 5 ಕ್ಕಿಂತ ಕಡಿಮೆಯಾಗಿದೆ ಎಂದು ಹೇಳಿದರು.

Join Whatsapp
Exit mobile version