ಜಾರಕಿಹೊಳಿ ಸೆಕ್ಸ್ ಸಿಡಿ ಹಗರಣ | ‘SIT’ ತನಿಖೆಗೆ ಆದೇಶ ನೀಡಿದ ರಾಜ್ಯ ಸರ್ಕಾರ

Prasthutha|

- Advertisement -

ಬೆಂಗಳೂರು :  ರಮೇಶ್ ಜಾರಕಿಹೊಳಿಯ ಸೆಕ್ಸ್ ಸಿಡಿ ಆರೋಪವನ್ನು ಎಸ್ ಐ ಟಿ ತನಿಖೆಗೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

“ನನ್ನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನನ್ನ ವಿರುದ್ಧ ಷಡ್ಯಂತ್ರ ರೂಪಿಸಲಾಗುತ್ತಿದೆ. ಇದರ ಬಗ್ಗೆ ಸಮಗ್ರ ತನಿಖೆ ನಡೆಸಬೇಕು” ಎಂದು ರಮೇಶ್ ಜಾರಕಿಹೊಳಿ ಪತ್ರ ಬರೆದಿದ್ದರು. ಈ ಹಿನ್ನೆಲೆ ಪ್ರಕರಣವನ್ನು ಎಸ್ ಐ ಟಿ ತನಿಖೆಗೆ ನೀಡಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.

- Advertisement -

ಎಲ್ಲೆಲ್ಲಿ ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ತಯಾರಾಗಿದೆ ಎಂಬ ಬಗ್ಗೆ ಎಸ್ ಐ ಟಿ ಪೊಲೀಸರು ತನಿಖೆ ನಡೆಸಲಿದ್ದಾರೆ. ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ತನಿಖೆಗೆ ಆದೇಶ ಹೊರಡಿಸಲಾಗಿದೆ. ಈ ಬಗ್ಗೆ ಸಿಎಂ, ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ.  ಸಂಪೂರ್ಣ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.



Join Whatsapp