2021-22ನೇ ಸಾಲಿನ ಶೈಕ್ಷಣಿಕ ವರ್ಷ ಜುಲೈ 15ರಿಂದ ಪ್ರಾರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆಬ್ರವರಿ 22ರಿಂದ 6, 7 ಮತ್ತು 8ನೇ ತರಗತಿ ಪ್ರಾರಂಭಿಸಲು ತೀರ್ಮಾನಿಸಲಾಗಿದೆ. ಈಗಾಗಲೇ 10ರಿಂದ 12ನೇ ತರಗತಿಗಳು ಸುಗಮವಾಗಿ ನಡೆಯುತ್ತಿದ್ದು, ಬೆಂಗಳೂರು ನಗರ ಮತ್ತು ಕೇರಳದ ಗಡಿ ಭಾಗಗಳಲ್ಲಿ ಸ್ವಲ್ಪ ನಿಧಾನವಾಗಿದೆ ಎಂದರು.
ಇಂದು ಆರೋಗ್ಯ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಲಾಗಿದೆ. ತರಗತಿ ಪ್ರಾರಂಭಿಸುವಂತೆ ಪೋಷಕರು ಮತ್ತು ಶಾಲಾಭಿವೃದ್ಧಿ ಮಂಡಳಿ ಸದಸ್ಯರ ಒತ್ತಡವಿದೆ. ಫೆಬ್ರವರಿ 1ರಿಂದ 9ರಿಂದ 11ನೇ ತರಗತಿ ಪ್ರಾರಂಭಗೊಂಡಿದೆ. ಆದರೂ ಆನ್ ಲೈನ್ ತರಗತಿ ಮುಂದುವರಿಸಲಾಗುತ್ತಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.
ಜುಲೈ 15ರಿಂದ ನೂತನ ಶೈಕ್ಷಣಿಕ ವರ್ಷ ಪ್ರಾರಂಭ; ಸಚಿವ ಸುರೇಶ್ ಕುಮಾರ್
Prasthutha|