‘ಜೂನ್‌ 30ರ ವರೆಗೂ ರಾಜ್ಯದಲ್ಲಿ ಲಾಕ್‌ಡೌನ್‌ ವಿಸ್ತರಿಸಿ’ : ಹೆಚ್.ಡಿ ರೇವಣ್ಣ ಆಗ್ರಹ

Prasthutha|

ಹಾಸನ : ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಜೂನ್‌ 30ರ ವರೆಗೂ ಲಾಕ್‌ಡೌನ್‌ ವಿಸ್ತರಿಸಲು ರಾಜ್ಯ ಸರ್ಕಾರಕ್ಕೆ ಶಾಸಕ ಎಚ್.ಡಿ.ರೇವಣ್ಣ ಆಗ್ರಹಿಸಿದ್ದಾರೆ.

- Advertisement -

ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಜೂನ್‌ 30ರ ವರೆಗೂ ಲಾಕ್‌ಡೌನ್‌ ವಿಸ್ತರಿಸಬೇಕು ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇಕಡಾ 5ಕ್ಕಿಂತ ಕಡಿಮೆ ಬರುವವರೆಗೂ ಲಾಕ್‌ಡೌನ್‌ ತೆರವು ಮಾಡಬಾರದು ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹೇಳಿದ್ದಾರೆ.

ಪರಿಸ್ಥಿತಿಗೆ ಅನುಗುಣವಾಗಿ ಜೂನ್‌ ಮತ್ತು ಜುಲೈ ನಂತರ ಶಾಲೆ, ಕಾಲೇಜು ತೆರೆಯಬೇಕು. ಎಸ್ಸೆಸ್ಸೆಲ್ಸಿ ಮತ್ತು ದ್ವಿತಿಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಬೇಕು. ಕೋವಿಡ್‌ ಪರಿಸ್ಥಿತಿ ಬಗ್ಗೆ ತಿಳಿಯದೆ ಲಾಕ್‌ಡೌನ್‌ ತೆರವುಗೊಳಿಸುವಂತೆ ಸಚಿವರು ಹೇಳಿಕೆ ನೀಡುವುದು ಸರಿಯಲ್ಲ. ಕೊರೊನಾ ಸಾವಿನ ಬಗ್ಗೆಯೂ ಸರ್ಕಾರ ಸರಿಯಾದ ಮಾಹಿತಿ ನೀಡುತ್ತಿಲ್ಲ. ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾದವರಿಗೆ ರಾಜ್ಯ ಸರ್ಕಾರ ಘೋಷಿಸಿರುವ ಮೊದಲ ಪ್ಯಾಕೇಜ್‌ ಪರಿಹಾರ ಇನ್ನೂ ತಲುಪಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ಜೂನ್.7ರವರೆಗೆ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಕೊರೋನಾ ಮತ್ತಷ್ಟು ನಿಯಂತ್ರಣಕ್ಕಾಗಿ ಜೂನ್.7ರ ನಂತರ ಒಂದು ವಾರ ಲಾಕ್ ಡೌನ್ ಮುಂದುವರೆಯುವ ಸಾಧ್ಯತೆ ಇದೆ.

Join Whatsapp