ಜ್ಯುಬಿಲಿಯಂಟ್ ಕಾರ್ಖಾನೆಯ ಕೊರೋನ ಕೇಸ್ ಗಳ ಯಶಸ್ವಿಯಾಗಿ ನಿರ್ವಹಿಸಿದ್ದ ವೈದ್ಯಾಧಿಕಾರಿ ನಾಗೇಂದ್ರ ಆತ್ಮಹತ್ಯೆ

Prasthutha|

ಮೈಸೂರು : ಕೊರೋನ ಸಂಕಷ್ಟ ಆರಂಭದಲ್ಲಿ ರಾಜ್ಯದಲ್ಲಿ ಭಾರೀ ಸುದ್ದಿ ಮಾಡಿದ್ದ ಜ್ಯುಬಿಲಿಯಂಟ್ ಕಾರ್ಖಾನೆಯ ಪರಿಸ್ಥಿತಿ ಸುಧಾರಿಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ್ದ ನಂಜನಗೂಡು ತಾಲೂಕು ವೈದ್ಯಾಧಿಕಾರಿ ನಾಗೇಂದ್ರ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಾಗೇಂದ್ರ ಅವರು ತಮ್ಮ ಮನೆಯಲ್ಲೇ ಆತ್ಮಹತ್ಯೆ ಮಾಡಿದ್ದು, ಕೊರೋನ ಸಂಕಷ್ಟ ನಿರ್ವಹಣೆಯಲ್ಲಿ ಉತ್ತಮ ಸೇವೆ ಸಲ್ಲಿಸಿ ಮೆಚ್ಚುಗೆ ಪಡೆದಿದ್ದರು. ಸತತ ಕರ್ತವ್ಯದ ಒತ್ತಡದಿಂದ ಬಳಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ, ಕಳೆದ ಐದು ತಿಂಗಳಿಂದ ಕೊರೋನ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿದ್ದ ಡಾ. ನಾಗೇಂದ್ರ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಅನುಮಾನಗಳೂ ಎದ್ದಿವೆ. ಡಾ. ನಾಗೇಂದ್ರರ ಆತ್ಮಹತ್ಯೆ ಹಿಂದಿನ ರಹಸ್ಯ ಬೇಧಿಸಬೇಕೆಂಬ ಬೇಡಿಕೆ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ.

- Advertisement -

ಕೊರೋನ ಸಂದರ್ಭ ನಂಜನಗೂಡಿನಲ್ಲಿ ಉತ್ತಮ ಸೇವೆ ಸಲ್ಲಿಸಿ ಡಾ. ನಾಗೇಂದ್ರ ಪ್ರಶಂಸೆಗೆ ಪಾತ್ರರಾಗಿದ್ದರು. ಜ್ಯುಬಿಲಿಯಂಟ್ ಕಾರ್ಖಾನೆಯ ಸೋಂಕು ಹರಡುವಿಕೆ ವಿಚಾರದಲ್ಲೂ ಇವರು ವಿಶೇಷ ಕಾಳಜಿ ವಹಿಸಿದ್ದರು. ಇದೀಗ ಮೈಸೂರಿನ ಆಲಹನಹಳ್ಳಿ ನಿವಾಸದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂಜನಗೂಡಿನಲ್ಲಿ ಕಳೆದ ಒಂದು ವರ್ಷದಿಂದ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಕೊಡ್ಲಾಪುರ ಗ್ರಾಮದಲ್ಲಿ ಆರು ವರ್ಷಗಳಿಂದ ವೈದ್ಯಾಧಿಕಾರಿಯಾಗಿದ್ದರು.

Join Whatsapp