Home ರಾಜ್ಯ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣ | ಸಿಇಒ ಪ್ರಶಾಂತ್ ಮಿಶ್ರಾ ವಿರುದ್ಧ ಎಫ್ ಐಆರ್

ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣ | ಸಿಇಒ ಪ್ರಶಾಂತ್ ಮಿಶ್ರಾ ವಿರುದ್ಧ ಎಫ್ ಐಆರ್

ಮೈಸೂರು : ನಂಜನಗೂಡು ತಾಲೂಕು ವೈದ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು ಲಭಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿ ಮೈಸೂರು ಜಿಲ್ಲಾ ಪಂಚಾಯತಿ ಸಿಇಒ ಪ್ರಶಾಂತ್ ಮಿಶ್ರಾ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಜಿ.ಪಂ. ಸಿಇಒ ಮಿಶ್ರಾ ಒತ್ತಡವೇ ಡಾ. ನಾಗೇಂದ್ರ ಆತ್ಮಹತ್ಯೆಗೆ ಕಾರಣ ಎಂದು ಎಫ್ ಐಆರ್ ನಲ್ಲಿ ದಾಖಲಾಗಿದೆ.

ಡಾ. ನಾಗೇಂದ್ರ ಅವರ ತಂದೆ ಟಿ.ಎಸ್. ರಾಮಕೃಷ್ಣ ಅವರು ನೀಡಿರುವ ದೂರಿನ ಆಧಾರದಲ್ಲಿ ಎಫ್ ಐಆರ್ ದಾಖಲಿಸಲಾಗಿದೆ. ಮೈಸೂರಿನ ವೈದ್ಯರಿಂದಲೂ ಸಿಇಒ ಮಿಶ್ರಾ ವಿರುದ್ಧ ಎಫ್ ಐಆರ್ ದಾಖಲಿಸಲು ಒತ್ತಡ ಕೇಳಿ ಬಂದಿತ್ತು. ಅಲ್ಲದೆ ಸಿಇಒ ಮಿಶ್ರಾರನ್ನು ಅಮಾನತುಗೊಳಿಸಬೇಕೆಂಬ ಬೇಡಿಕೆಯೂ ವೈದ್ಯರಿಂದ ಕೇಳಿಬಂದಿತ್ತು. ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೈಸೂರು ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ವೈದ್ಯರೂ ಪ್ರತಿಭಟನೆಯ ಮೂಲಕ ತಮ್ಮ ಆಕ್ರೋಶ ದಾಖಲಿಸಿದ್ದಾರೆ.

ಮೈಸೂರಿನ ಆಲಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದೆ. ಕೊರೋನ ಸಂಕಷ್ಟ ಆರಂಭವಾದ ಸಂದರ್ಭದಲ್ಲಿ ನಂಜನಗೂಡಿನ ಜ್ಯುಬಿಲಿಯಂಟ್ ಕಾರ್ಖಾನೆಯಲ್ಲಿ ಸೋಂಕು ಹರಡುತ್ತಿದ್ದ ಬಗ್ಗೆ ವರದಿಗಳಾಗಿದ್ದಾಗ, ಉತ್ತಮ ಸೇವೆ ಸಲ್ಲಿಸಿದ್ದ ಡಾ. ನಾಗೇಶ್ ಅವರ ಏಕಾಏಕಿ ಆತ್ಮಹತ್ಯೆ ಸಾರ್ವಜನಿಕ ವಲಯದಲ್ಲಿ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು.

Join Whatsapp
Exit mobile version