ತಮಿಳುನಾಡಿನ ಪಟಾಕಿ‌ ಕಾರ್ಖಾನೆಯಲ್ಲಿ ಸ್ಫೋಟ: 12 ಮಂದಿ ಮೃತ

Prasthutha|

ತಮಿಳುನಾಡು: ರಾಜ್ಯದ ಶಿವಕಾಶಿ ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ನಡೆದು ಎಂಟು ಮಂದಿ ಮೃತಪಟ್ಟು,12 ಮಂದಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

- Advertisement -

ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ರಕ್ಷಣಾ ಕಾರ್ಯ ನಡೆಯುತ್ತಿದೆ.

ಮೃತಪಟ್ಟ ಎಂಟು ಮಂದಿ ಪಟಾಕಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಸ್ಫೋಟದ ನಂತರ ಇಡೀ ಕಾರ್ಖಾನೆಗೆ ಬೆಂಕಿ ಹೊತ್ತಿಕೊಂಡಿತ್ತು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಆರಂಭಿಸಿದ್ದಾರೆ.

- Advertisement -

ಕಾರ್ಖಾನೆ ಪರವಾನಗಿ ಪಡೆದ ಘಟಕವಾಗಿದ್ದು, ಸ್ಫೋಟಕ್ಕೆ ಕಾರಣವೇನು ಎಂದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp