ತುಮಕೂರು: ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ್ದ ಡಿವೈಎಸ್ ​ಪಿ ವಿರುದ್ಧ ಮತ್ತೊಂದು ದೂರು

Prasthutha|

ತುಮಕೂರು: ದೂರು ನೀಡಲು ಬಂದಿದ್ದ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದ ಮಧುಗಿರಿ ಡಿವೈಎಸ್ ​ಪಿ ರಾಮಚಂದ್ರಪ್ಪ ವಿರುದ್ಧ ಮತ್ತೊಂದು ದೂರು ‌ದಾಖಲಾಗಿದೆ.

- Advertisement -

ಡಿವೈಎಸ್ ಪಿ ರಾಮಚಂದ್ರಪ್ಪ ವಿರುದ್ಧ ಮತ್ತೊಬ್ಬ ಸಂತ್ರಸ್ತ ಮಹಿಳೆ ​ಮಧುಗಿರಿ ಪೋಲಿಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳ ಹಾಗೂ ಜಾತಿ ನಿಂದನೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಡಿವೈಎಸ್ ಪಿ ರಾಮಚಂದ್ರಪ್ಪ ಈಗಾಗಲೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮತ್ತೊಂದು ದೂರು ದಾಖಲು ಹಿನ್ನೆಲೆಯಲ್ಲಿ ಮತ್ತಷ್ಟು ಸಂಕಷ್ಟ ಎದುರಾಗಲಿದೆ.

ತುಮಕೂರು ಜಿಲ್ಲೆಯ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ತಮ್ಮ ಜಮೀನಿನ ಕುರಿತಾಗಿ ವ್ಯಾಜ್ಯ ಆರಂಭವಾಗಿದ್ದು, ನೀವು ನಮಗೆ ನ್ಯಾಯ ಕೊಡಿಸಬೇಕು ಎಂದು ದೂರು ನೀಡಿದ್ದರು. ಆಗ ಮಹಿಳೆಗೆ ನಿಮಗೆ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿ ಧನಾತ್ಮಕವಾಗಿ ಮಾತನಾಡಿದ್ದ ಡಿವೈಎಸ್‌ಪಿ ರಾಮಚಂದ್ರಪ್ಪ ನಾವು ವಿಚಾರಣೆಗೆ ಕರೆದಾಗ ಪೊಲೀಸ್ ಠಾಣೆಗೆ ಬರಬೇಕು ಎಂದು ಹೇಳಿದ್ದರು. ನಾವು ಕೇಳಿದಾಗ ನೀವು ಮಾಹಿತಿ ಕೊಡಬೇಕು ಎಂದು ಹೇಳಿದ್ದರು. ಇದಕ್ಕೆ ಮಹಿಳೆಯೂ ಒಪ್ಪಿಕೊಂಡಿದ್ದರು.

- Advertisement -

ಈ ಸಂಬಂಧ ಮಾತುಕತೆ ನಡೆಸಬೇಕು, ಕೆಲವು ವಿಚಾರಣೆ ಮಾಡಬೇಕು ಎಂದು ಡಿವೈಎಸ್​ ಪಿ ರಾಮಚಂಪ್ಪ ಮಹಳೆಯನ್ನು ಕಚೇರಿಗೆ ಕರೆಸಿದ್ದರು. ಈ ವೇಳೆ ಮಹಿಳೆಯನ್ನು ಪುಸಲಾಯಿಸಿರುವ ಡಿವೈಎಸ್‌ ಪಿ ರಾಮಚಂದ್ರಪ್ಪ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಬಳಿಕ ಮಹಿಳೆ ಮಧುಗಿರಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇರೆಗೆ ಸೆಕ್ಷನ್​​ 68, 75, 79 ಅತ್ಯಾಚಾರ ಕೇಸ್ ಅಡಿಯಲ್ಲಿ ಎಫ್​ಐಆರ್​ ದಾಖಲಾಗಿತ್ತು. ಈ ದೂರಿನ ಮೇರೆಗೆ ಮಧುಗಿರಿ ಉಪವಿಭಾಗ ಡಿವೈಎಸ್ ಪಿ ರಾಮಚಂದ್ರಪ್ಪನನ್ನು ಅರೆಸ್ಟ್ ಮಾಡಲಾಗಿತ್ತು. ಸದ್ಯ ಡಿವೈಎಸ್​ಪಿ ರಾಮಚಂದ್ರಪ್ಪ ನ್ಯಾಯಾಂಗ ಬಂಧನದಲ್ಲಿದ್ದಾರೆ.



Join Whatsapp