ದಿಶಾ ರವಿ ಮತ್ತೆ ಪೊಲೀಸ್ ಕಸ್ಟಡಿಗೆ

Prasthutha|

- Advertisement -

- Advertisement -

ದೆಹಲಿ ಪೊಲೀಸರ ಕೋರಿಕೆಯ ಮೇರೆಗೆ ದೆಹಲಿ ನ್ಯಾಯಾಲಯವು ದಿಶಾ ರವಿ ಅವರನ್ನು ಒಂದು ದಿನಕ್ಕೆ ಪೊಲೀಸ್‌ ಕಸ್ಟಡಿಗೆ ಕಳುಹಿಸಿ ಆದೇಶ ಹೊರಡಿಸಿದೆ. ಫೆ. 19 ರಂದು ಮೂರು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು. ನಂತರ ದೆಹಲಿ ಪೊಲೀಸರು ದಿಶಾಳನ್ನು ಮುಂದಿನ ವಾರ ಮತ್ತೆ ಪೊಲೀಸ್ ಕಸ್ಟಡಿಗೆ ನೀಡುವಂತೆ ಕೇಳಿಕೊಂಡಿತ್ತು.

ಗ್ರೇಟಾ ಥನ್‌ಬರ್ಗ್ ಟೂಲ್‌ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 13 ರಂದು ಬೆಂಗಳೂರಿನ ತಮ್ಮ ಮನೆಯಿಂದ ಬಂಧಿಸಲ್ಪಟ್ಟಿದ್ದ ದಿಶಾ ರವಿ ಅವರನ್ನು ಐದು ದಿನಗಳ ಕಾಲ ಪೊಲೀಸರು ಕಸ್ಟಡಿಯಲ್ಲಿರಿಸಿ ಶುಕ್ರವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಫೆಬ್ರವರಿ 22 ರಂದು ಅವರನ್ನು ಮತ್ತೆ ವಿಚಾರಣೆಗೆ ಒಳಪಡಿಸಲು ಬಯಸಿದ್ದರಿಂದ ಮೂರು ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿಡಬೇಕೆಂದು ಪೊಲೀಸರು ನ್ಯಾಯಾಧೀಶರನ್ನು ಕೋರಿದ್ದರಿಂದ ನ್ಯಾಯಾಲಯವು ಈ ಆದೇಶ ನೀಡಿದೆ.

ದಿಶಾ ಅವರು ವಿಚಾರಣೆ ವೇಳೆ ಸಹಕರಿಸಲಿಲ್ಲ ಎಂದು ಪೊಲೀಸರ ಪರ ಹಾಜರಾದ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್‌‌ ಇರ್ಫಾನ್ ಅಹ್ಮದ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಪೊಲೀಸರು ಮತ್ತೆ ಅವರನ್ನು ಪ್ರಶ್ನಿಸಿ ಈ ಪ್ರಕರಣದ ಇತರ ಸಹ ಆರೋಪಿಗಳ ಬಗ್ಗೆ ಮಾಹಿತಿ ಪಡೆಯಲು  ಬಯಸಿದ್ದಾರೆ ಎಂದು ಇರ್ಫಾನ್ ಹೇಳಿದ್ದಾರೆ.



Join Whatsapp