ದೆಹಲಿ ಗಲಭೆ | ಇಬ್ಬರು ಆರೋಪಿಗಳ ಜಾಮೀನು ಅರ್ಜಿ ವಜಾ

Prasthutha|

ಹೊಸದಿಲ್ಲಿ : ಈಶಾನ್ಯ ದೆಹಲಿಯಲ್ಲಿ 2020ರಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಜಾಮೀನು ಅರ್ಜಿಯನ್ನು ದೆಹಲಿ ಕೋರ್ಟ್ ವಜಾಗೊಳಿಸಿದ್ದು, ಇಬ್ಬರ ವಿರುದ್ಧ ಗಂಭೀರ ಆರೋಪ ಇರುವುದರಿಂದ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

- Advertisement -

ವೆಯ್ಟರ್ ದಿಲ್ಬರ್ ನೇಗಿ ಕೊಲೆ ಪ್ರಕರಣದಲ್ಲಿ ಬಂಧಿತರಾದ ಇಬ್ಬರು ಆರೋಪಿಗಳಾದ ರಶೀದ್ ಮತ್ತು ಶೋಯಿಬ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿರುವುದಾಗಿ ವರದಿ ತಿಳಿಸಿದೆ.

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್, ಪೊಲೀಸರು ಚಾರ್ಜ್ ಶೀಟ್, ಸಿಸಿಟಿವಿ ಫೂಟೇಜ್ ಮತ್ತು ವಿಡಿಯೋ ಫೂಟೇಜ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಆರೋಪ ಗಂಭೀರ ಸ್ವರೂಪದ್ದಾಗಿದ್ದು, ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಜಸ್ಟೀಸ್ ವಿನೋದ್ ಯಾದವ್ ಅವರಿರುವ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

- Advertisement -

ಮೃತ ದಿಲ್ಬರ್ ನೇಗಿ ಗೋದಾಮಿನಲ್ಲಿ ಇದ್ದಾಗಲೇ ಬೆಂಕಿ ಹಚ್ಚಿರುವುದು ಸಿಸಿಟಿವಿ ಫೂಟೇಜ್ ನಲ್ಲಿ ದಾಖಲಾಗಿದೆ ಎಂದು ಹೇಳಿದ ನ್ಯಾಯಾಲಯ, ಇಬ್ಬರು ಆರೋಪಿಗಳು ಸಿಸಿಟಿವಿ ಫೂಟೇಜ್ ನಲ್ಲಿ ತಮ್ಮ ಕೈಯಲ್ಲಿ ಕಬ್ಬಿಣದ ಸರಳುಗಳನ್ನು ಹಿಡಿದುಕೊಂಡಿರುವುದು ಸ್ಪಷ್ಟವಾಗಿ ಕಾಣಿಸುತ್ತದೆ ಎಂದು ತಿಳಿಸಿದೆ. ಸ್ವೀಟ್ ಅಂಗಡಿಯೊಂದರಲ್ಲಿ ನೇಗಿಯ ಸುಟ್ಟು ಹೋದ ಶವ ಪತ್ತೆಯಾಗಿತ್ತು.

Join Whatsapp