ಕೇಂದ್ರ ಸರಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ದಿಕ್ಕು ತಪ್ಪಿಸುವ ಸಲುವಾಗಿ ಖಲೀಸ್ತಾನಿ ಕರಪತ್ರ ಮತ್ತು ಸ್ಕಿಕರ್ ಗಳನ್ನು ಹಂಚುತ್ತಿದ್ದ ಆರೆಸ್ಸೆಸ್ ಕಾರ್ಯಕರ್ತನನ್ನು ಪ್ರತಿಭಟನಾನಿರತ ರೈತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ರೈತ ಹೋರಾಟವನ್ನು ದಿಕ್ಕುತಪ್ಪಿಸಲು ಕೇಂದ್ರ ಬಿಜೆಪಿ ಸರಕಾರ, ಆರೆಸ್ಸೆಸ್ ಹಾಗೂ ಬಲಪಂಥೀಯ ಮಾಧ್ಯಮಗಳು ಪ್ರಯತ್ನಿಸುತ್ತಿವೆ ಎಂದು ರೈತರು ಆಪಾದಿಸಿದ್ದಾರೆ.
ಪ್ರತಿಭಟನಾನಿರತ ರೈತರನ್ನು ಭಯೋತ್ಪಾದಕರು, ಖಲೀಸ್ತಾನಿಗಳು, ನಕ್ಸಲೈಟ್‌ಗಳು ಎಂದು ಬಿಂಬಿಸುವಲ್ಲಿ ಬಿಜೆಪಿ ಐಟಿ ಸೆಲ್ ನ ಪಾತ್ರ ಬಹಳಷ್ಟಿದೆ ಎಂದು ದೂರಿದರು.