ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ!

Prasthutha|

- Advertisement -

ಬೆಂಗಳೂರು: ಮೇ 24ರಿಂದ ಜೂ.10ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್​ ಕುಮಾರ್ ಹೇಳಿದ್ದಾರೆ. ಅವರು ಇಂದು (ಶುಕ್ರವಾರ) ಸಮಗ್ರ ಶಿಕ್ಷಣ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಕೊರೋನಾದಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಈಡಾಗಿ ಮಕ್ಕಳ ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸದ ಶುಲ್ಕವನ್ನು ಕಟ್ಡುವ ಸ್ಥಿತಿಯಲ್ಲಿಲ್ಲ.  ಹೀಗಾಗಿ 2019ರ ಬೋಧನಾ ಶುಲ್ಕದ ಶೇ.70ರಷ್ಟು ಪಡೆಯಬೇಕು. ಶಾಲೆಗಳು ಯಾವುದೇ ಅಭಿವೃದ್ಧಿ ಶುಲ್ಕ ಪಡೆಯಬಾರದು. 1, 2 ಅಥವಾ 3 ಕಂತುಗಳ ಮೂಲಕ ಹಣವನ್ನು ಪಡೆದುಕೊಳ್ಳಬಹುದೆಂದು ಸಚಿವರು ತಿಳಿಸಿದ್ದಾರೆ. ಒಂದು ವೇಳೆ ಹೆಚ್ಚಿನ ಶುಲ್ಕವನ್ನು ಪಡೆದುಕೊಂಡಿದ್ದರೆ ಮುಂದಿನ ವರ್ಷಕ್ಕೆ ಸರಿದೂಗಿಸಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

Join Whatsapp