Home ಟಾಪ್ ಸುದ್ದಿಗಳು ಧಾರಾಕಾರ ಮಳೆ: ಸೋಮವಾರ ದ.ಕ. ಜಿಲ್ಲೆಯ ಎಲ್ಲಾ ಪ್ರಾಥಮಿಕ ಶಾಲೆ, ಹೈಸ್ಕೂಲ್ ಗಳಿಗೆ ರಜೆ

ಧಾರಾಕಾರ ಮಳೆ: ಸೋಮವಾರ ದ.ಕ. ಜಿಲ್ಲೆಯ ಎಲ್ಲಾ ಪ್ರಾಥಮಿಕ ಶಾಲೆ, ಹೈಸ್ಕೂಲ್ ಗಳಿಗೆ ರಜೆ

ಮಂಗಳೂರು: ಕಳೆದ ಕೆಲವು ದಿನಗಳಿಂದ ಕರಾವಳಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಮತ್ತು ಹೈಸ್ಕೂಲ್, ಅಂಗನವಾಡಿ ಕೇಂದ್ರ ಗಳಿಗೆ ನಾಳೆಯೂ ( ಜುಲೈ 11) ರಜೆ ಘೋಷಿಸಲಾಗಿದೆ.
ಆದರೆ ಪಿಯು, ಪದವಿ ಕಾಲೇಜುಗಳು ಎಂದಿನಂತೆ ಕಾರ್ಯಾಚರಿಸಲಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ

ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ಸೋಮವಾರ ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ ಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಸಾರಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಸತತವಾಗಿ ಕಳೆದ ಹಲವು ದಿನಗಳಿಂದ ಮಳೆ ಸುರಿಯುತ್ತಿದ್ದು, ಒಂದು‌‌ ವಾರ ರಜೆ ನೀಡಲಾಗಿತ್ತು. ಇಂದು ಸಂಜೆ ಹವಾಮಾನ ಇಲಾಖೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದ್ದರಿಂದ ಮತ್ತೆ ರಜೆ ನೀಡಲಾಗಿದೆ.

Join Whatsapp
Exit mobile version